×
Ad

ಬೆಳಗಾವಿ ಮನಪಾ ಚುನಾವಣೆ: ಬಿಜೆಪಿಯ ಪ್ರಣಾಳಿಕೆ ನೋಡಿ ದಂಗಾದ ಜನತೆ!

Update: 2021-08-29 14:20 IST

ಬೆಳಗಾವಿ, ಆ.29: ಬೆಳಗಾವಿ ಮಹಾನಗರ ಪಾಲಿಕೆಗೆ ಸೆ.3ರಂದು ಚುನಾವಣೆ ನಡೆಯಲಿದ್ದು, ಈ ಸಂಬಂಧ ಬಿಜೆಪಿ ಶನಿವಾರ ಬಿಡುಗಡೆ ಮಾಡಿರುವ ಪ್ರಣಾಳಿಕೆಯಲ್ಲಿ ಉಲ್ಲೇಖಿಸಿರುವ ‘ಪಾಲಿಕೆ ವತಿಯಿಂದ ಶವ ಸಂಸ್ಕಾರಕ್ಕೆ ಉಚಿತ ವ್ಯವಸ್ಥೆ’ ವಿಚಾರ ಸಾರ್ವಜನಿಕವಾಗಿ ಚರ್ಚೆಗೆ ಗ್ರಾಸವಾಗಿದೆ.

ನಗರದ ಧರ್ಮನಾಥ ಭವನದಲ್ಲಿ ಶನಿವಾರ ಆಯೋಜಿಸಿದ್ದ ಸಮಾರಂಭದಲ್ಲಿ ಪಾಲಿಕೆ ಚುನಾವಣೆಯ ಬಿಜೆಪಿ ಪ್ರಣಾಳಿಕೆಯನ್ನು ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಬಿಡುಗಡೆಗೊಳಿಸಿದ್ದಾರೆ. ಅದರಲ್ಲಿ ಹಲವು ಅಂಶಗಳು ಉಲ್ಲೇಖವಾಗಿದ್ದರೂ, “ಶವ ಸಂಸ್ಕಾರಕ್ಕೆ ಉಚಿತ ವ್ಯವಸ್ಥೆ” ಎಂಬ ಭರವಸೆ ನಗರವಾಸಿಗಳ ಹುಬ್ಬೇರುವಂತೆ ಮಾಡಿದೆ.

ಉಳಿದಂತೆ ಪ್ರಣಾಳಿಕೆಯಲ್ಲಿರುವ ಪ್ರಮುಖ ಅಂಶಗಳು

1. ಬಾಂಡ್‌ಗಳ ಆಧಾರದ ಮೇಲೆ ಖರೀದಿಸಿ ನಿರ್ಮಿಸಿದ ಮನೆಗಳನ್ನು ರಾಜ್ಯ ಸರಕಾರದಿಂದ ಸಕ್ರಮ ಮಾಡಿಸಲು ಪ್ರಾಮಾಣಿಕ ಪ್ರಯತ್ನ

2. ನಗರದ ಸ್ವಚ್ಛತೆಗೆ ಮೊದಲ ಆದ್ಯತೆ. ಮನೆ ಮನೆಗಳಿಂದ ಕಸ ಸಂಗ್ರಹಕ್ಕೆ ಸಮರ್ಪಕ ವ್ಯವಸ್ಥೆ ಜಾರಿಗೆ ಕ್ರಮ

3. ಪಾಲಿಕೆ ವ್ಯಾಪ್ತಿಯ ಎಲ್ಲ ನಾಲೆಗಳ ಕಾಂಕ್ರಿಟೀಕರಣ

4. ಬೆಳಗಾವಿಯನ್ನು ಕಸಮುಕ್ತ ನಗರವನ್ನಾಗಿ ಮಾಡುವ ಗುರಿ

5. ನಗರದ ಪ್ರವಾಸಿ ತಾಣ, ಉದ್ಯಾನ ಮತ್ತು ಕೆರೆಗಳ ಸುಂದರಗೊಳಿಸಲು ಒತ್ತು

6. ನಗರದಲ್ಲಿ ಮಲ್ಟಿ ಲೆವೆಲ್‌ ಕಾರ್‌ ಪಾರ್ಕಿಂಗ್‌ ವ್ಯವಸ್ಥೆ

7. ಪಾಲಿಕೆ ವ್ಯಾಪ್ತಿಯ ಎಲ್ಲ ಸರಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಉನ್ನತೀಕರಣ ಹಾಗೂ ಸರಕಾರಿ ಆಸ್ಪತ್ರೆಯ ಬೆಡ್‌ಗಳ ಸಂಖ್ಯೆ ಹೆಚ್ಚಳಕ್ಕೆ ಕ್ರಮ

8. ನಗರದಲ್ಲಿ ಉತ್ತಮ ಕ್ರೀಡಾಂಗಣಗಳ ನಿರ್ಮಾಣ

9. ಪಾಲಿಕೆಯ ಎಲ್ಲ ಯೋಜನೆಗಳು ಜನರಿಗೆ ನೇರವಾಗಿ ತಲುಪಿಸಲು ಆಧುನಿಕ ತಂತ್ರಜ್ಞಾನದ ಬಳಕೆ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News