×
Ad

ಆ. 30: ರಾಷ್ಟ್ರೀಯ ಶಿಕ್ಷಣ ನೀತಿ ಕಾರ್ಯಕ್ರಮಕ್ಕೆ ಚಾಲನೆ

Update: 2021-08-29 21:48 IST

ಮಂಗಳೂರು, ಆ.29: ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ ಮತ್ತು ಕೌಶಲ್ಯಾಭಿವೃದ್ಧಿ ಸಚಿವರು ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದ ಸಹಕುಲಾಧಿಪತಿಯೂ ಆದ ಡಾ. ಅಶ್ವತ್ಥ್ ನಾರಾಯಣ ರಾಷ್ಟ್ರೀಯ ಶಿಕ್ಷಣ ನೀತಿ-2020 ಕಾರ್ಯಕ್ರಮ ಅನುಷ್ಠಾನಕ್ಕೆ ಮಂಗಳೂರು ವಿಶ್ವವಿದ್ಯಾಲಯದ ಮಂಗಳ ಸಭಾಂಗಣದಲ್ಲಿ ಆ.30ರಂದು ಮಧ್ಯಾಹ್ನ 12 ಗಂಟೆಗೆ ಚಾಲನೆ ನೀಡಲಿದ್ದಾರೆ.

ಇದೇ ಸಂದರ್ಭದಲ್ಲಿ ಸಚಿವರು ಮೂಡಬಿದಿರೆ, ಬನ್ನಡ್ಕದಲ್ಲಿ ಹೊಸದಾಗಿ ಸ್ಥಾಪಿಸಲಾಗುತ್ತಿರುವ ಮಂಗಳೂರು ವಿಶ್ವವಿದ್ಯಾನಿಲಯದ ಘಟಕ ಕಾಲೇಜನ್ನು ಸಾಂಕೇತಿಕವಾಗಿ ಉದ್ಘಾಟಿಸುವರು. ನಿಟ್ಟೆ ವಿಶ್ವವಿದ್ಯಾನಿಲಯದ ಕುಲಾಧಿಪತಿ ಡಾ. ಎನ್. ವಿನಯ್ ಹೆಗ್ಡೆ ಶುಭಾಶಂಸನೆಗೈಯಲಿ ದ್ದಾರೆ. ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಪಿ.ಸುಬ್ರಹ್ಮಣ ಯಡಪಡಿತ್ತಾಯ ಅಧ್ಯಕ್ಷತೆ ವಹಿಸುವರು.

ಆ.30ರಂದು ಬೆಳಗ್ಗೆ 10 ಗಂಟೆಗೆ ರಾಷ್ಟ್ರೀಯ ಶಿಕ್ಷಣ ನೀತಿ-2020ರ ಬಗ್ಗೆ ಅರಿವು ಮೂಡಿಸಲು, ಕಾರ್ಯಾಗಾರ ಆಯೋಜಿಸಲಾಗಿದೆ. ರಾಜ್ಯ ಉನ್ನತ ಶಿಕ್ಷಣ ಪರಿಷತ್‌ನ ಉಪಾಧ್ಯಕ್ಷರು, ಅಧ್ಯಕ್ಷರು, ಅಧ್ಯಯನ ಮಂಡಳಿ ಅಧ್ಯಕ್ಷರು, ಸಂಯೋಜಿತ/ ಸ್ವಾಯತ್ತ/ಘಟಕ ಕಾಲೇಜುಗಳ ಪ್ರಾಂಶುಪಾಲರು ಮತ್ತು ವಿದ್ಯಾರ್ಥಿ ಪ್ರತಿನಿಧಿಗಳು ಭಾಗವಹಿಸಲಿರುವರು. ಬಿ. ತಿಮ್ಮೇಗೌಡ ದಿಕ್ಕೂಚಿ ಭಾಷಣ ಮಾಡಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News