×
Ad

ಆ.30ರಿಂದ ಸಚಿವ ಅಂಗಾರ ದ.ಕ. ಜಿಲ್ಲಾ ಪ್ರವಾಸ

Update: 2021-08-29 22:06 IST

ಮಂಗಳೂರು, ಆ.29: ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲ ಸಾರಿಗೆ ಸಚಿವ ಎಸ್. ಅಂಗಾರ ಇದೇ ಆ.30ರಿಂದ ಜಿಲ್ಲೆಯ ಪ್ರವಾಸ ಕೈಗೊಂಡಿದ್ದಾರೆ.

ಆ.30ರಂದು ಬೆಳಗ್ಗೆ 9:30ಕ್ಕೆ ಮಂಗಳೂರಿಗೆ ಆಗಮಿಸಿ ಬಂಟ್ಸ್ ಹಾಸ್ಟೆಲ್ ರೋಡ್‌ನಲ್ಲಿರುವ ತಪೋವನ ಆರೋಗ್ಯ ಕೇಂದ್ರದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸುವರು. 11 ಗಂಟೆಗೆ ತುಳು ಸಾಹಿತ್ಯ ಅಕಾಡಮಿಗೆ ಭೇಟಿ ನೀಡುವರು. ಮಧ್ಯಾಹ್ನ 3 ಗಂಟೆಗೆ ಕೋವಿಡ್-19 ಸೋಂಕು ನಿಯಂತ್ರಣ ಕ್ರಮಗಳ ಕುರಿತು ಜಿಲ್ಲಾಧಿಕಾರಿ ಕಚೇರಿಯಲ್ಲಿ ಹಿರಿಯ ಅಧಿಕಾರಿಗಳು ಹಾಗೂ ಆರೋಗ್ಯ ಅಧಿಕಾರಿಗಳೊಂದಿಗೆ ಸಭೆ ನಡೆಸುವರು. ಸಂಜೆ 6 ಗಂಟೆಗೆ ಸುಳ್ಯಕ್ಕೆ ತೆರಳಿ ವಾಸ್ತವ್ಯ ಮಾಡುವರು.

ಆ.31ರಂದು ಬೆಳಗ್ಗೆ 9 ಗಂಟೆಗೆ ಕಡಬ ತಾಲೂಕಿನ ಬಳ್ಪ ಗ್ರಾಮದ ಬಳ್ಪ ಟವರ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸುವರು. 10 ಗಂಟೆಗೆ ಕಡಬದ ಅಂಬೇಡ್ಕರ್ ಭವನದಲ್ಲಿ ಅಕ್ರಮ ಸಕ್ರಮಗಳ ಬಗ್ಗೆ ಬೈಠಕ್ ನಡೆಸುವರು. ಮಧ್ಯಾಹ್ನ 2 ಗಂಟೆಗೆ ಸುಳ್ಯ ತಾಪಂನಲ್ಲಿ ಹಕ್ಕುಪತ್ರ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸುವರು. 2:30ಕ್ಕೆ ಸುಳ್ಯ ತಾಪಂನಲ್ಲಿ ಅಕ್ರಮ-ಸಕ್ರಮಗಳ ಬೈಠಕ್ ನಡೆಸುವರು. ಸಂಜೆ ಸುಳ್ಯದಲ್ಲಿ ವಾಸ್ತವ್ಯ ಮಾಡುವರು.

ಸೆ.1ರಂದು ಬೆಳಗ್ಗೆ 9 ಗಂಟೆಗೆ ಕಡಬ ತಾಲೂಕಿನ ಹಿರಿಯ ಪ್ರಾಥಮಿಕ ಶಾಲಾ ಕಟ್ಟಡ ಉದ್ಘಾಟಿಸಲಿದ್ದಾರೆ. ಮಧ್ಯಾಹ್ನ 12:30ಕ್ಕೆ ಬಿಳಿನೆಲೆ ಗ್ರಾಮದ ಭಾಗ್ಯ ಕಾಂಕ್ರಿಟ್ ರಸ್ತೆಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಸಂಜೆ 6:40ಕ್ಕೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸುವರು.

ಸೆ.2ರಂದು ರಾತ್ರಿ 7ಗಂಟೆಗೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿ, ಸುಳ್ಯಕ್ಕೆ ತೆರಳಿ ವಾಸ್ತವ್ಯ ಮಾಡುವರು. ಸೆ.3ರಂದು ಬೆಳಗ್ಗೆ 10 ಗಂಟೆಗೆ ಮಂಗಳೂರಿನಲ್ಲಿ ಕಿಯೋನಿಕ್ಸ್ ಸಂಸ್ಥೆಯಿಂದ ಕೆಎಫ್ ಡಿಸಿಯ ಮಾಹಿತಿ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಮಧ್ಯಾಹ್ನ 12 ಗಂಟೆಗೆ ಸಮುದ್ರದ ಉಪ್ಪು ನೀರನ್ನು ಸಿಹಿ ನೀರನ್ನಾಗಿ ಪರಿವರ್ತಿಸುವ ಪ್ರಾತ್ಯಕ್ಷಿಕೆಯಲ್ಲಿ ಭಾಗವಹಿಸುವರು. ಸಂಜೆ 5 ಗಂಟೆಗೆ ಮಂಗಳೂರಿನಿಂದ ಸುಳ್ಯಕ್ಕೆ ರಸ್ತೆ ಮೂಲಕ ಪ್ರಯಾಣ ಬೆಳೆಸುವರು ಎಂದು ಸಚಿವರ ವಿಶೇಷ ಕರ್ತವ್ಯಾಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News