×
Ad

ಬಿಜೆಪಿ ಆಡಳಿತದಲ್ಲಿ ಸಾವು ಖಚಿತ, ಶವಸಂಸ್ಕಾರ ಉಚಿತ!: ಕಾಂಗ್ರೆಸ್ ವ್ಯಂಗ್ಯ

Update: 2021-08-29 22:22 IST

ಬೆಂಗಳೂರು: ಸೆ.3ಕ್ಕೆ ನಡೆಯಲಿರುವ ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಯ ಸಿದ್ಧತೆಯಲ್ಲಿ ತೊಡಗಿಕೊಂಡಿರುವ ರಾಜಕೀಯ ಪಕ್ಷಗಳು ಮತದಾರರನ್ನು ಸೆಳೆಯುವ ಪ್ರಯತ್ನಗಳು ನಡೆಸುತ್ತಿದ್ದು, ಬಿಜೆಪಿ ಪಕ್ಷದ ಪ್ರಣಾಳಿಕೆ ಇದೀಗ ವಿವಾದ ಸೃಷ್ಟಿಸಿದೆ. 

ಬಿಜೆಪಿಯು ತನ್ನ ಪ್ರಣಾಳಿಕೆಯಲ್ಲಿ “ಶವ ಸಂಸ್ಕಾರಕ್ಕೆ ಉಚಿತ ವ್ಯವಸ್ಥೆ” ಎಂಬ ಭರವಸೆ ನೀಡಿದ್ದು, ಈ ಬಗ್ಗೆ ಕಾಂಗ್ರೆಸ್ ಬಿಜೆಪಿ ವಿರುದ್ಧ ಟ್ವಿಟರ್ ನಲ್ಲಿ  ವಾಗ್ದಾಳಿ ನಡೆಸಿದೆ. 

''ದುಬಾರಿ ತೆರಿಗೆ, ನಿರುದ್ಯೋಗ, ಆರ್ಥಿಕ ಕುಸಿತ, ಬೆಲೆ ಏರಿಕೆಯಂತಹ ತನ್ನ ದುರಾಡಳಿತದಲ್ಲಿ ಜನರು ಬದುಕಲಾರರು ಎಂದು ಬಿಜೆಪಿ ಪಕ್ಷಕ್ಕೂ ಖಾತ್ರಿಯಾಗಿದೆ! ಹಾಗಾಗಿಯೇ ಬೆಳಗಾವಿ ಪಾಲಿಕೆ ಚುನಾವಣೆಯ ಪ್ರಣಾಳಿಕೆಯಲ್ಲಿ ಉಚಿತ ಶವಸಂಸ್ಕರದ ಭರವಸೆ ನೀಡಿದೆ'' ಎಂದು ವ್ಯಂಗ್ಯವಾಡಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News