ಈ ರಾಜ್ಯದ ಎಲ್ಲರಿಗೂ ಕೋವಿಡ್-19 ಲಸಿಕೆಯ ಮೊದಲ ಡೋಸ್

Update: 2021-08-30 06:07 GMT

ಶಿಮ್ಲಾ: ರಾಜ್ಯದಲ್ಲಿ ಎಲ್ಲ ನಾಗರಿಕರಿಗೆ ಕೋವಿಡ್-19 ವಿರುದ್ಧದ ಲಸಿಕೆಯ ಮೊದಲ ಡೋಸ್ ನೀಡಲಾಗಿದೆ ಎಂದು ಹಿಮಾಚಲ ಪ್ರದೇಶ ಸರ್ಕಾರ ಹೇಳಿಕೊಂಡಿದೆ.

 "ಹದಿನೆಂಟು ವರ್ಷ ಮೇಲ್ಪಟ್ಟ ಎಲ್ಲ ವಯಸ್ಕ ಜನತೆಗೆ ಕೋವಿಡ್-19 ಲಸಿಕೆಯ ಮೊದಲ ಡೋಸ್ ನೀಡಿದ ಮೊಟ್ಟಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಹಿಮಾಚಲ ಪ್ರದೇಶ ಪಾತ್ರವಾಗಿದೆ" ಎಂದು ಆರೋಗ್ಯ ಸಚಿವ ಡಾ.ರಾಜೀವ್ ಸೈಝಲ್ ಹೇಳಿಕೆ ನೀಡಿದ್ದಾರೆ.

ಎಎನ್‌ಐ ಜತೆ ಮಾತನಾಡಿದ ಅವರು, "ರಾಜ್ಯದಲ್ಲಿ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಕೋವಿಡ್-19 ಲಸಿಕೆಯ ಮೊದಲ ಡೋಸ್ ನೀಡಲಾಗಿದ್ದು, 2021ರ ನವೆಂಬರ್ 30ರ ಒಳಗಾಗಿ ಎಲ್ಲರಿಗೂ ಎರಡು ಡೋಸ್‌ಗಳನ್ನು ನೀಡುವ ಗುರಿ ಹೊಂದಲಾಗಿದೆ" ಎಂದು ತಿಳಿಸಿದ್ದಾರೆ.

"ಕೋವಿಡ್-19 ನಿರ್ವಹಣೆಯಲ್ಲಿ ಮತ್ತು ಲಸಿಕೆ ನೀಡಿಕೆಯಲ್ಲಿ ಹಿಮಾಚಲ ಪ್ರದೇಶದ ಮುಖ್ಯಮಂತ್ರಿಗಳ ಪ್ರಯತ್ನವನ್ನು ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ. ಅರಂಭದಿಂದಲೂ ರಾಜ್ಯ ಉತ್ತಮವಾಗಿ ಪರಿಸ್ಥಿತಿಯನ್ನು ನಿಭಾಯಿಸಿದೆ" ಎಂದು ಅವರು ವಿವರಿಸಿದ್ದಾರೆ. ಲಸಿಕೆ ಫಲಾನುಭವಿಗಳು ಮತ್ತು ರಾಜ್ಯದ ಆರೋಗ್ಯ ಕಾರ್ಯಕರ್ತರ ಜತೆ ಪ್ರಧಾನಿ ನರೇಂದ್ರ ಮೋದಿಯವರ ವರ್ಚುವಲ್ ಸಂವಾದ ನಡೆಸುವ ಕಾರ್ಯಕ್ರಮವನ್ನೂ ರಾಜ್ಯ ಸರ್ಕಾರ ಸದ್ಯದಲ್ಲೇ ಏರ್ಪಡಿಸಲಿದೆ ಎಂದು ಅವರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News