ಕೇರಳದಲ್ಲಿ ಇಂದಿನಿಂದ ರಾತ್ರಿ ಕರ್ಫ್ಯೂ ಜಾರಿ

Update: 2021-08-30 06:36 GMT
ಸಾಂದರ್ಭಿಕ ಚಿತ್ರ

ಕಾಸರಗೋಡು: ಕೊರೋನ ಸೋಂಕು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಕೇರಳದಲ್ಲಿ ಇಂದಿನಿಂದ ರಾತ್ರಿ ಕರ್ಫ್ಯೂ ಜಾರಿಗೊಳಿಸಲಾಗಿದೆ.

ರಾತ್ರಿ 10 ರಿಂದ ಬೆಳಗ್ಗೆ 6 ಗಂಟೆ ತನಕ ಕರ್ಫ್ಯೂ ಜಾರಿಯಲ್ಲಿರಲಿದೆ.  ಅಗತ್ಯ ಸೇವೆಗಳಿಗೆ ವಿನಾಯಿತಿ ನೀಡಲಾಗಿದೆ. ವ್ಯಾಪಾರ ಮಳಿಗೆಗಳು ರಾತ್ರಿ 10 ಗಂಟೆ ಮೊದಲು ಮುಚ್ಚಬೇಕು. ಅನಗತ್ಯವಾಗಿ ಒಡಾಡುವವರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು. ಪೊಲೀಸ್ ತಪಾಸಣೆ ತೀವ್ರ ಗೊಳಿಸಲು ತೀರ್ಮಾನಿಸಲಾಗಿದೆ ಎಂದು ಪ್ರಕಟನೆ ತಿಳಿಸಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News