×
Ad

ಜೆಡಿಎಸ್ ತೆರೆದ ‌ಬಾಗಿಲು; ಹೋಗುವವರು ಹೋಗಲಿ, ಬರುವವರು ಬರಲಿ: ಮಾಜಿ ಸಿಎಂ ಎಚ್‌ಡಿಕೆ

Update: 2021-08-30 13:11 IST

ಕಲಬುರ್ಗಿ : ಜೆಡಿಎಸ್ ತೆರೆದ ಬಾಗಿಲಿದ್ದಂತೆ. ಹೋಗುವವರು ಹೋಗಲಿ, ಬರುವವರು ಬರಲಿ‌ ಎಂದು ಜೆಡಿಎಸ್ ವರಿಷ್ಠ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

ಪಾಲಿಕೆ ಚುನಾವಣೆ ಪ್ರಚಾರದ ವೇಳೆ ಕಲಬುರ್ಗಿ ನಗರಕ್ಕೆ ಬಂದಿದ್ದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಜೆಡಿಎಸ್ ಸೇರುವ ಬಗ್ಗೆ ಜಿ.ಟಿ. ದೇವೇಗೌಡ ಅವರು ತಮ್ಮ ನಿರ್ಧಾರವನ್ನು ಹೇಳಿದ್ದಾರೆ. ಆ ಬಗ್ಗೆ ಹೆಚ್ಚು ಪ್ರತಿಕ್ರಿಯೆ ನೀಡುವುದಿಲ್ಲ. ನಾವು ಮುಖಂಡರನ್ನು ಕರೆ ತರಲು ಬೇರೆ ಪಕ್ಷದ ಮುಖಂಡರ ಮನೆ ಬಳಿ ನಿಂತಿಲ್ಲ.‌ ಕಾಂಗ್ರೆಸ್, ಬಿಜೆಪಿಯವರೇ ಈ ಕೆಲಸ ಮಾಡುತ್ತಿದ್ದಾರೆ. ನಾವು ನಮ್ಮ ಕಾರ್ಯಕರ್ತರನ್ನು ನಂಬಿ ಪಕ್ಷ ಸಂಘಟನೆ ಮಾಡುತ್ತಿದ್ದೇವೆ’ ಎಂದರು.

‘ಕಲಬುರ್ಗಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಕನಿಷ್ಠ 20 ಜೆಡಿಎಸ್ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News