ಮಂಗಳೂರು ; ಯುವತಿಗೆ ಲೈಂಗಿಕ ಕಿರುಕುಳ ಪ್ರಕರಣ: ಆರೋಪಿ ರವಿರಾಜ್ ಸೆರೆ
Update: 2021-08-30 16:25 IST
ಉಳ್ಳಾಲ: ಇಲ್ಲಿನ ಠಾಣೆ ವ್ಯಾಪ್ತಿಯ ತೊಕ್ಕೊಟ್ಟು ಬಳಿ ಯುವತಿಯೋರ್ವಳಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು ಕಿನ್ಯ ನಿವಾಸಿ ರವಿರಾಜ್ (31) ಎಂದು ಗುರುತಿಸಲಾಗಿದೆ. ಪೈಂಟಿಂಗ್ ಕೆಲಸ ಮಾಡುತ್ತಿರುವ ಈತ ಕೆಲಸ ನಿಮಿತ್ತ ತೊಕ್ಕೊಟ್ಟುವಿಗೆ ಬಂದಿದ್ದ ಎನ್ನಲಾಗಿದೆ. ಈ ವೇಳೆ ಯುವತಿ ಸೈಕಲ್ ನಲ್ಲಿ ಹೋಗುತಿರುವುದನ್ನು ಗಮನಿಸಿದ ರವಿರಾಜ್ ಸೈಕಲ್ ತಡೆದು ಲೈಂಗಿಕ ಕಿರುಕುಳ ನೀಡಿದ್ದ ಎನ್ನಲಾಗಿದ್ದು, ಈ ಬಗ್ಗೆ ಉಳ್ಳಾಲ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿ ರವಿರಾಜ್ ನನ್ನು ಬಂಧಿಸಿದ್ದಾರೆ.