×
Ad

ಉಡುಪಿ: ಯುವತಿಗೆ ಚೂರಿ ಇರಿದು ಬಳಿಕ ಕತ್ತು ಕೊಯ್ದುಕೊಂಡ ಯುವಕ; ಇಬ್ಬರೂ ಗಂಭೀರ

Update: 2021-08-30 17:55 IST

ಉಡುಪಿ, ಆ.30: ಯುವತಿಯೋರ್ವಳಿಗೆ ಚೂರಿಯಿಂದ ಇರಿದ ಯುವಕ ಬಳಿಕ ತಾನೂ ಕತ್ತು ಕೊಯ್ದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಸೋಮವಾರ ಸಂಜೆ ಉಡುಪಿ ಸಂತೆಕಟ್ಟೆ ಸಮೀಪದ ರೋಬೊ ಸಾಪ್ಟ್ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ.

ಯುವತಿ ಸ್ಕೂಟರ್‌ನಲ್ಲಿ ಆಗಮಿಸಿದ್ದರೆ ಯುವಕ ಬೈಕಿನಲ್ಲಿ ಬಂದಿದ್ದ ಎನ್ನಲಾಗಿದೆ. ಬಳಿಕ ಯುವಕ ತನ್ನಲ್ಲಿದ್ದ ಚೂರಿಯಿಂದ ಯುವತಿಗೆ ಇರಿದು ಬಳಿಕ ತಾನು ಅಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಸ್ಥಳದಲ್ಲಿ ಚೂರಿ ಪತ್ತೆಯಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ರಸ್ತೆ ಬದಿ ರಕ್ತದ ಮಡುವಿನಲ್ಲಿ ಬಿದ್ದು ಹೊರಳಾಡುತ್ತಿದ್ದ ಇಬ್ಬರನ್ನು ಕೂಡಲೇ ಆಸ್ಪತ್ರೆಗೆ ಸಾಗಿಸಲಾಗಿದೆ. ಇವರಿಬ್ಬರು ಅಂಬಾಗಿಲಿನವರು ಎಂದು ಹೇಳಲಾಗುತ್ತಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದು ಬರಬೇಕಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News