ಉಡುಪಿ ಜಿಲ್ಲಾ ಕಾಂಗ್ರೆಸ್ ಬ್ಲಾಕ್ ಉಸ್ತುವಾರಿಗಳ ಸಭೆ
ಉಡುಪಿ, ಆ.30: ಮುಂಬರುವ ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಚುನಾವಣೆಗಾಗಿ ಅಭ್ಯರ್ಥಿಗಳ ಆಯ್ಕೆಯ ನಿಟ್ಟಿನಲ್ಲಿ ಕಳೆದ ಬಾರಿ ಚುನಾವಣೆಯಲ್ಲಿ ಸ್ಪರ್ಧಿಸಿದ ಅಭ್ಯರ್ಥಿಗಳ ವಿವರವನ್ನು ಸಂಗ್ರಸುವುದರೊಂದಿಗೆ ಸಮಾಜ ಸೇವೆಯಲ್ಲಿ ತೊಡಗಿಕೊಂಡಿರುವ ಯುವ ಕಾರ್ಯಕರ್ತರನ್ನು ಗುರುತಿಸುವ ಕೆಲಸ ಆಗಬೇಕಾಗಿದೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್‌ಕುಮಾರ್ ಕೊಡವೂರು ಹೇಳಿದ್ದಾರೆ.
ನಗರದಲ್ಲಿ ನಡೆದ ಬ್ಲಾಕ್ ಉಸ್ತುವಾರಿಗಳ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು. ಕೆಪಿಸಿಸಿ ಆದೇಶದಂತೆ ಸಹಾಯ ಹಸ್ತದ ಮಾಹಿತಿ ಯನ್ನು ಉಸ್ತುವಾರಿಗಳು ಬ್ಲಾಕ್ ಅಧ್ಯಕ್ಷರೊಂದಿಗೆ ಸಮಾಲೋಚಿಸಿ ಜಿಲ್ಲಾ ಕಾಂಗ್ರೆಸಿಗೆ ವರದಿ ನೀಡಬೇಕಾಗಿದೆ. ಬ್ಲಾಕ್ ಮಟ್ಟದಲ್ಲಿ ನಡೆಯುತ್ತಿ ರುವ ಎಲ್ಲಾ ಕಾರ್ಯಕ್ರಮಗಳ ವಿವರಗಳನ್ನು ಜಿಲ್ಲಾ ಕಾಂಗ್ರೆಸ್ ವೆಬ್‌ಸೈಟ್‌ನಲ್ಲಿ ದಾಖಲಿಸುವ ಪ್ರಕ್ರಿಯೆ ನಡೆಯುತ್ತಿದೆ ಎಂದರು.
ಜಿಲ್ಲಾ ವ್ಯಾಪ್ತಿಯ ಮುಖಂಡರು ಬೂತ್ ಹಾಗೂ ಗ್ರಾಮೀಣ ಸಮಿತಿಗಳಿಗೆ ಆಗಾಗ್ಯೆ ಭೇಟಿ ನೀಡಿ ಕ್ರಾರ್ಯಕ್ರಮಗಳ ರೂಪುರೇಷೆಗಳನ್ನು ರೂಪಿಸ ಬೇಕೆಂಬ ಅಭಿಪ್ರಾಯ ಹಾಗೂ ಸಹಕಾರಿ ಸಂಸ್ಥೆಗಳನ್ನು ರಾಷ್ಟ್ರೀಯ ಮಟ್ಟದಲ್ಲಿ ನಿಯಂತ್ರಿ ಸುವತ್ತ ಬಿಜೆಪಿ ಹುನ್ನಾರ ನಡೆಸುತ್ತಿದೆ ಇದರ ಬಗ್ಗೆ ಪಕ್ಷವು ಸ್ಪಷ್ಟ ನಿಲುವನ್ನು ವ್ಯಕ್ತಪಡಿಸಬೇಕು ಎಂಬ ಅಭಿಪ್ರಾಯ ಸಭೆಯಲ್ಲಿ ವ್ಯಕ್ತವಾಯಿತು.
ಸಭೆಯಲ್ಲಿ ಬ್ಲಾಕ್ ಉಸ್ತುವಾರಿಗಳಾದ ನೀರೆ ಕೃಷ್ಣ ಶೆಟ್ಟಿ, ರಾಜು ಪೂಜಾರಿ, ಕಿಶನ್ ಹೆಗ್ಡೆ ಕೊಳ್ಕೆಬೈಲ್, ಪ್ರಸನ್ನ ಕುಮಾರ್ ಶೆಟ್ಟಿ, ವೈ. ಸುಕು ಮಾರ್, ರಮೇಶ್ ಶೆಟ್ಟಿ ಹಾಗೂ ಡಾ. ಸುನೀತಾ ಶೆಟ್ಟಿ, ವಕ್ತಾರ ಭಾಸ್ಕರ್ ರಾವ್ ಕಿದಿಯೂರು, ಸಾಮಾಜಿಕ ಜಾಲತಾಣ ವಿಭಾಗದ ಅಧ್ಯಕ್ಷ ರೋಶನ್ ಶೆಟ್ಟಿ ಉಪಸ್ಥಿತರಿದ್ದರು. ಪ್ರಧಾನ ಕಾರ್ಯದರ್ಶಿ ಕೆ. ಅಣ್ಣಯ್ಯ ಶೇರಿಗಾರ್ ವಂದಿಸಿದರು.