×
Ad

ಅತ್ಯಾಚಾರ ಆರೋಪಿ ಆತ್ಮಹತ್ಯೆ ಪ್ರಕರಣ: ಪಿಎಸ್ಸೈ ಸೇರಿ ಐವರು ಪೊಲೀಸರು ಅಮಾನತು

Update: 2021-08-30 20:55 IST

ವಿಜಯಪುರ, ಆ.30: ಅಪ್ರಾಪ್ತ ಬಾಲಕಿ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಆತ್ಮಹತ್ಯೆ ಆರೋಪ ಪ್ರಕರಣ ಸಂಬಂಧ ಪಿಎಸ್ಸೈ ಸೇರಿದಂತೆ ಐವರು ಪೊಲೀಸ್ ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ.

ಸಿಂದಗಿ ಪೊಲೀಸ್ ಠಾಣೆ ಪಿಎಸ್ಸೈ ಎಸ್.ಎಚ್. ಹೊಸಮನಿ, ಪೊಲೀಸ್ ಸಿಬ್ಬಂದಿಗಳಾದ ಎಸ್.ಬಿ.ನಾದ, ಗುರುರಾಜ ಮಾಶ್ಯಾಳ, ಆನಂದ ಪಾಟೀಲ, ಪಿ.ಎಲ್.ಪಟ್ಟೇದ ಅವರನ್ನು ಕರ್ತವ್ಯ ನಿರ್ಲಕ್ಷ್ಯ ಆರೋಪದ ಮೇರೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಚ್.ಡಿ.ಆನಂದಕುಮಾರ್ ಅಮಾನತುಗೊಳಿಸಿದ್ದಾರೆ.

ಏನಿದು ಪ್ರಕರಣ?: ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ ಸಂಬಂಧ ಬಾಲಕಿ ತಂದೆ ನೀಡಿದ ದೂರಿನ ಮೇರೆಗೆ ಆರೋಪಿ ದೇವಿಂದ್ರ ಸಂಗೋಗಿ(37) ಎಂಬಾತನನ್ನು ಆ.28ರಂದು ಪೊಲೀಸರು ವಶಕ್ಕೆ ಪಡೆದಿದ್ದರು. ಆದರೆ, ಆರೋಪಿಯು ಆ.29ರ ಬೆಳಗ್ಗೆ ಸಿಂದಗಿ ಪೊಲೀಸ್ ಠಾಣೆಯ ಶೌಚಾಲಯದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದನು. ತದನಂತರ ಪೊಲೀಸರ ಕಿರುಕುಳದಿಂದ ಆರೋಪಿ ಸಾವಿಗೀಡಾಗಿದ್ದಾನೆ ಎಂದು ಆರೋಪಿಸಿ ಕುಟುಂಬದವರು ಠಾಣೆಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News