ಉಡುಪಿ ಜಿಲ್ಲೆಯಲ್ಲಿ ಒಂದೇ ದಿನ 34,967 ಮಂದಿಗೆ ಲಸಿಕೆ
Update: 2021-08-30 21:24 IST
ಉಡುಪಿ, ಆ.30: ಉಡುಪಿ ಜಿಲ್ಲೆಯಲ್ಲಿ ಸೋಮವಾರ ಒಂದೇ ದಿನದಲ್ಲಿ ಒಟ್ಟು 34,967 ಮಂದಿಗೆ ಕೋವಿಡ್ ಲಸಿಕೆಯನ್ನು ನೀಡಲಾಗಿದೆ. ಇದರಲ್ಲಿ 27,595 ಮಂದಿಗೆ ಮೊದಲ ಡೋಸ್ ಹಾಗೂ 7372 ಮಂದಿಗೆ ಎರಡನೇ ಡೋಸ್ ನೀಡಲಾಗಿದೆ ಎಂದು ಡಿಎಚ್‌ಓ ಡಾ. ನಾಗಭೂಷಣ ಉಡುಪ ತಿಳಿಸಿದ್ದಾರೆ.
18ರಿಂದ 44ವರ್ಷದೊಳಗಿನ 20,055 ಮಂದಿ ಮೊದಲ ಹಾಗೂ 3617 ಮಂದಿ ಎರಡನೇ ಡೋಸ್ ಪಡೆದಿದ್ದರೆ, 45 ವರ್ಷ ಮೇಲಿನ 7540 ಮಂದಿಗೆ ಮೊದಲ ಹಾಗೂ 3754 ಮಂದಿಗೆ ಎರಡನೇ ಡೋಸ್ ಲಸಿಕೆಯನ್ನು ನೀಡಲಾಗಿದೆ. ಒಬ್ಬ ಆರೋಗ್ಯ ಕಾರ್ಯಕರ್ತರೂ ಇಂದು ಎರಡನೇ ಡೋಸ್ ಪಡೆದಿದ್ದಾರೆ.
ಜಿಲ್ಲೆಯಲ್ಲಿ ಈವರೆಗೆ ಒಟ್ಟಾರೆ 7,02,453 ಮಂದಿ ಮೊದಲ ಡೋಸ್ ಹಾಗೂ 2,62,855 ಮಂದಿ ಎರಡನೇ ಡೋಸ್ ಲಸಿಕೆಯನ್ನು ಪಡೆದಿದ್ದಾರೆ ಎಂದು ಡಾ.ಉಡುಪ ತಿಳಿಸಿದರು.