×
Ad

ಉಡುಪಿ: ಆ.31ರಂದು ಕೊರೋನ ಲಸಿಕೆ ಲಭ್ಯತೆ ವಿವರ

Update: 2021-08-30 21:25 IST

ಉಡುಪಿ, ಆ.30: ಉಡುಪಿ ಜಿಲ್ಲೆಯಲ್ಲಿ ಆ.31ರಂದು ಮೊದಲ ಮತ್ತು ಎರಡನೇ ಡೋಸ್ ಕೋವಿಡ್ ಲಸಿಕೆ ಲಭ್ಯವಿದ್ದು, ವಿವರ ಈ ಕೆಳಕಂಡಂತಿದೆ. ಉಡುಪಿ ಅಜ್ಜರಕಾಡು ಜಿಲ್ಲಾಸ್ಪತ್ರೆಯ ಸೇಂಟ್ ಸಿಸಿಲಿ ಶಾಲಾ ಲಸಿಕಾ ಕೇಂದ್ರದಲ್ಲಿ ಕೋವಿಶೀಲ್ಡ್ ಪ್ರಥಮ ಮತ್ತು ಎರಡನೇ ಡೋಸ್ ಒಟ್ಟು -300, ಮಣಿಪಾಲ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಮಾಧವ ಕೃಪಾ ಶಾಲೆಯಲ್ಲಿ ಕೋವಿಶೀಲ್ಡ್ ಪ್ರಥಮ ಮತ್ತು 2ನೇ ಡೋಸ್ -300, ಪುತ್ತೂರು ಭಗವತಿ ದುರ್ಗಾಪರಮೇಶ್ವರಿ ಸಭಾಭವನದಲ್ಲಿ ಕೋವಿಶೀಲ್ಡ್ ಪ್ರಥಮ ಮತ್ತು 2ನೇ ಡೋಸ್-400. ಕೃಷ್ಣಪ್ಪ ಫ್ಲಾಟ್ ಲಕ್ಷ್ಮೀನಗರ ಕೊಡವೂರು ಕೋವಿಶೀಲ್‌ಲ್ಡ್ ಪ್ರಥಮ ಮತ್ತು 2ನೇ ಡೋಸ್-200.

ಬನ್ನಂಜೆಯ ಶಿವ ಸಮಾಜದ ಅಂಬೇಡ್ಕರ್ ಭವನದಲ್ಲಿ ಕೋವಿಶೀಲ್ಡ್ ಪ್ರಥಮ ಮತ್ತು 2ನೇ ಡೋಸ್ ಒಟ್ಟು-300, ಕುಕ್ಕಿಕಟ್ಟೆ ಎಫ್‌ಪಿಎಐನ ಇಂದಿರಾನಗರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕೋವಿಶೀಲ್ಡ್ ಪ್ರಥಮ ಮತ್ತು ಎರಡನೇ ಡೋಸ್- 200, ಕುಕ್ಕಿಕಟ್ಟೆ ಹಿರಿಯ ಪ್ರಾಥಮಿಕ ಶಾಲೆ ಕೋವಿಶೀಲ್ಡ್ ಪ್ರಥಮ ಮತ್ತು 2ನೇ ಡೋಸ್- 100, ಉಡುಪಿ ಸರಕಾರಿ ತಾಯಿ ಮತ್ತು ಮಕ್ಕಳ (ಬಿಆರ್‌ಎಸ್)ಆಸ್ಪತ್ರೆಯಲ್ಲಿ ಕೋವಿಶೀಲ್ಡ್ ಪ್ರಥಮ ಮತ್ತು 2ನೇ ಡೋಸ್- 200.

ಗ್ರಾಮೀಣ ಪ್ರದೇಶದಲ್ಲಿ 18 ವರ್ಷ ಮೇಲ್ಪಟ್ಟವರು ಕೋವಿಡ್-19 ಪ್ರಥಮ ಮತ್ತು 2ನೇ ಡೋಸ್ ಲಸಿಕೆ ಪಡೆಯಲು ಹತ್ತಿರದ ಸರಕಾರಿ ಆಸ್ಪತ್ರೆ/ಆಶಾ ಕಾರ್ಯಕರ್ತೆಯರನ್ನು ಸಂಪರ್ಕಿಸಿ ಲಸಿಕೆ ಲ್ಯತೆಯನ್ನು ಖಚಿತಪಡಿಸಿಕೊಂಡು ಲಸಿಕಾ ಕೇಂದ್ರಕ್ಕೆ ಬಂದು ಲಸಿಕೆ ಪಡೆಯಬಹುದು ಎಂದು ಡಿಎಚ್‌ಓ ಡಾ. ನಾಗಭೂಷಣ ಉಡುಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News