ಜೆಡಿಎಸ್ ನೊಂದಿಗೆ ಬಿಜೆಪಿ ಹೊಂದಾಣಿಕೆ ಇಲ್ಲ: ಅರುಣ್ ಸಿಂಗ್

Update: 2021-08-31 10:18 GMT

ಮೈಸೂರು, ಆ.31:  ಜೆಡಿಎಸ್ ಮುಳುಗುತ್ತಿರುವ ಹಡಗು, ಆ ಪಕ್ಷದೊಂದಿಗೆ ಬಿಜೆಪಿ ಯಾವುದೇ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಹೇಳಿದ್ದಾರೆ.

ನಗರದ ಚಾಮುಂಡಿ ಬೆಟ್ಟಕ್ಕೆ ಮಂಗಳವಾರ ಭೇಟಿ ನೀಡಿ ಶ್ರೀಚಾಮುಂಡೇಶ್ವರಿ ದೇವಿ ಆಶೀರ್ವಾ ದ ಪಡೆದು ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜೆಡಿಎಸ್ ಮುಳುಗುತ್ತಿದೆ, ಬಿಜೆಪಿ ಬೆಳೆಯುತ್ತಿದೆ. ಹಾಗಾಗಿ ಜೆಡಿಎಸ್ ಪಕ್ಷದೊಂದಿಗೆ ಅಧಿಕೃತವಾಗಿ ಮತ್ತು ಅನಧಿಕೃತವಾಗಿಯೂ ಹೊಂದಾಣಿಕೆ ಇಲ್ಲ ಎಂದು ಹೇಳಿದರು.

ಬಿಜೆಪಿ ವಿಶ್ವದಲ್ಲಿಯೇ ಅತೀ ದೊಡ್ಡ ರಾಜಕೀಯ ಪಕ್ಷ. ಹಾಗಾಗಿ ನಾವು ಯಾರ ಜೊತೆಯೂ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ. ಬಿ‌.ಎಸ್.ಯಡಿಯೂರಪ್ಪ ದೊಡ್ಡನಾಯಕರು, ಅವರಿಗೆ ಸಂಘಟನೆಯ ಬಗ್ಗೆ ಗೊತ್ತಿದೆ. ಅವರನ್ನು ಪಕ್ಷ ಸಂಘಟನೆಗೆ ಬಳಸಿಕೊಳ್ಳುತ್ತೇವೆ ಎಂದು ಹೇಳಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರ್ಕಾರ ಉತ್ತಮ ಆಡಳಿತ ನಡೆಸುತ್ತಿದೆ. ರಾಜ್ಯದ ಹಿತದೃಷ್ಟಿಯಿಂದ ಪರಿಪೂರ್ಣವಾಗಿ ಕೆಲಸ ಮಾಡುತ್ತಿದೆ ಎಂದು ಹೇಳಿದರು.

ಮುಂದಿನ ಸಾರ್ವತ್ರಿಕ ಚುನಾವಣೆಯಲ್ಲಿ ಅತೀ ಹೆಚ್ಚು ಸ್ಥಾನ ಗೆಲ್ಲುತ್ತೇವೆ. ಪಕ್ಷದ ಸಂಘಟನೆ ಈ ಭಾಗದಲ್ಲಿ ಚೆನ್ನಾಗಿ ಆಗುತ್ತಿದೆ. ರಾಜ್ಯ ಸಚಿವ  ಸಂಪುಟದಲ್ಲಿ ಯಾವುದೇ ಗೊಂದಲ ‌ಇಲ್ಲ ಎಂದು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News