ಈವರೆಗೆ ಶೇ.54.74 ರಷ್ಟು ಪಠ್ಯ ಪುಸ್ತಕ ಪೂರೈಕೆ: ಹೈಕೋರ್ಟ್‍ಗೆ ಸರಕಾರದ ಹೇಳಿಕೆ

Update: 2021-08-31 14:15 GMT

ಬೆಂಗಳೂರು, ಆ.31: ರಾಜ್ಯದಲ್ಲಿ 1ರಿಂದ 10ನೇ ತರಗತಿವರೆಗಿನ ಸರಕಾರಿ ಹಾಗೂ ಅನುದಾನಿತ ಶಾಲೆಗಳ ವಿದ್ಯಾರ್ಥಿಗಳಿಗೆ ಈವರೆಗೆ ಶೇ.54.74ರಷ್ಟು ಪಠ್ಯ ಪುಸ್ತಕ ಪೂರೈಸಲಾಗಿದೆ ಎಂದು ಹೈಕೋರ್ಟ್‍ಗೆ ರಾಜ್ಯ ಸರಕಾರ ಮಾಹಿತಿ ನೀಡಿದೆ. 

ಈ ಕುರಿತು ಎ.ಎ.ಸಂಜೀವ್ ನಾರಾಯಣ ಹಾಗೂ ಇತರರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಸತೀಶ್‍ಚಂದ್ರ ಶರ್ಮಾ ಅವರಿದ್ದ ವಿಭಾಗೀಯ ನ್ಯಾಯಪೀಠಕ್ಕೆ ಸರಕಾರ ಈ ಮಾಹಿತಿ ನೀಡಿದೆ. 

ವಿಚಾರಣೆ ವೇಳೆ ಸರಕಾರಿ ವಕೀಲರು ಹಾಜರಾಗಿ, ರಾಜ್ಯದಲ್ಲಿ ಶಾಲಾ ಪಠ್ಯಪುಸ್ತಕಗಳ ಮುದ್ರಣ ಕಾರ್ಯ ಮುಂದುವರೆದಿದೆ. ರಾಜ್ಯದ ಸರಕಾರಿ ಹಾಗೂ ಅನುದಾನಿತ ಶಾಲೆಗಳ ವಿದ್ಯಾರ್ಥಿಗಳಿಗೆ ಈವರೆಗೆ ಶೇ.54.74ರಷ್ಟು ಪಠ್ಯ ಪುಸ್ತಕ ಪೂರೈಸಲಾಗಿದೆ. ಮುಂದಿನ 20 ದಿನಗಳಲ್ಲಿ ಎಲ್ಲ ಪಠ್ಯ ಪುಸ್ತಕ ಪೂರೈಕೆ ಮಾಡಲಾಗುವುದು ಎಂದು ಹೈಕೋರ್ಟ್‍ಗೆ ಭರವಸೆ ನೀಡಿದರು. 

ಈ ಹೇಳಿಕೆ ದಾಖಲಿಸಿಕೊಂಡ ನ್ಯಾಯಪೀಠ, ಪಠ್ಯಪುಸ್ತಕ ಪೂರೈಕೆ ಕಾರ್ಯವನ್ನು 20 ದಿನಗಳಲ್ಲಿ ಪೂರ್ಣಗೊಳಿಸಬೇಕು. ಪುನಃ ಸಮಯ ಕೇಳುವಂತಿಲ್ಲ ಎಂದು ಸರಕಾರಕ್ಕೆ ನಿರ್ದೇಶಿಸಿ ವಿಚಾರಣೆಯನ್ನು ಮುಂದೂಡಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News