ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು ಹೀಗೆ...

Update: 2021-08-31 17:13 GMT

ಬೆಂಗಳೂರು: ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಇತ್ತೀಚೆಗೆ ಕಾಗ್ರೆಸ್ ಸೇರುವ ಬಗ್ಗೆ ಮಾಹಿತಿ ನೀಡಿದ್ದು, ಇದೀಗ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು,  'ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ನನ್ನ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ
ಜತೆ ಚರ್ಚಿಸಿದ್ದಾರೆ. ಈ ಬಗ್ಗೆ ಹೈಕಮಾಂಡ್ ಜತೆಗೆ ಚರ್ಚಿಸುವುದಾಗಿ ತಿಳಿಸಿದ್ದೇನೆ. ಸದ್ಯಕ್ಕೆ ನಡೆದಿರುವುದು ಇಷ್ಟೇ ಬೆಳವಣಿಗೆ. ಹೈಕಮಾಂಡ್ ಜತೆ ಚರ್ಚಿಸಿದ ಬಳಿಕ ಮುಂದಿನ ಬೆಳವಣಿಗೆ' ಎಂದು ತಿಳಿಸಿದ್ದಾರೆ.

"ನಾನು ಕಾಂಗ್ರೆಸ್ ಸೇರಲು ನಿರ್ಧರಿಸಿದ್ದೇನೆ. ಸಿದ್ದರಾಮಯ್ಯ ಮತ್ತು ಡಿ.ಕೆ‌.ಶಿವಕುಮಾರ್ ಅವರೊಂದಿಗೆ ಮಾತುಕತೆ ನಡೆಸಿದ್ದು ಸಿದ್ದರಾಮಯ್ಯ ಅವರು ನಾನು ಕಾಂಗ್ರೆಸ್ ಪಕ್ಷಕ್ಕೆ ಬಂದರೆ ಚಾಮುಂಡೇಶ್ವರಿ ಕ್ಷೇತ್ರ ಬಿಟ್ಟುಕೊಡುವುದಾಗಿ ಹೇಳಿದ್ದಾರೆ'' ಎಂದು ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ  ತಿಳಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News