ಇಂಗ್ಲೆಂಡ್ ವಿರುದ್ಧ 4ನೇ ಟೆಸ್ಟ್: ಕನ್ನಡಿಗ ಪ್ರಸಿದ್ಧ ಕೃಷ್ಣ ಭಾರತ ಕ್ರಿಕೆಟ್ ತಂಡಕ್ಕೆ ಸೇರ್ಪಡೆ
ಲಂಡನ್: ದಿ ಓವಲ್‌ನಲ್ಲಿ ಗುರುವಾರ ಆರಂಭವಾಗಲಿರುವ ಇಂಗ್ಲೆಂಡ್ ವಿರುದ್ಧದ ನಾಲ್ಕನೇ ಟೆಸ್ಟ್‌ಗಾಗಿ ಭಾರತ ತಂಡಕ್ಕೆ ಕರ್ನಾಟಕದ ವೇಗದ ಬೌಲರ್ ಪ್ರಸಿದ್ಧ್ ಕೃಷ್ಣ ಅವರನ್ನು ಸೇರಿಸಲಾಗಿದೆ ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಬುಧವಾರ ತಿಳಿಸಿದೆ.
"ಅಖಿಲ ಭಾರತ ಸೀನಿಯರ್ ಆಯ್ಕೆ ಸಮಿತಿಯು ತಂಡದ ಮ್ಯಾನೇಜ್‌ಮೆಂಟ್‌ನ ಕೋರಿಕೆಯ ಮೇರೆಗೆ ವೇಗದ ಬೌಲರ್ ಪ್ರಸಿದ್ದ ಕೃಷ್ಣ ಅವರನ್ನು ನಾಲ್ಕನೇ ಟೆಸ್ಟ್‌ಗಾಗಿ ಭಾರತ ತಂಡಕ್ಕೆ ಸೇರಿಸಿಕೊಂಡಿದೆ" ಎಂದು ಬಿಸಿಸಿಐ ಮಾಧ್ಯಮ ಪ್ರಕಟಣೆಯೊಂದರಲ್ಲಿ ತಿಳಿಸಿದೆ.
ಮೀಸಲು ಆಟಗಾರರ ಪಟ್ಟಿಯಲ್ಲಿದ್ದ ಪ್ರಸಿದ್ಧ್ ಕೃಷ್ಣ ಪ್ರವಾಸದ ಆರಂಭದಿಂದಲೇ ಟೀಮ್ ಇಂಡಿಯಾದೊಂದಿಗೆ ತರಬೇತಿ ಹಾಗೂ ಪ್ರಯಾಣ ಮಾಡುತ್ತಿದ್ದಾರೆ.
ನಾಲ್ಕನೇ ಟೆಸ್ಟ್ ಲಂಡನ್ ನ ಓವಲ್ ನಲ್ಲಿ ಸೆಪ್ಟೆಂಬರ್ 2 ರಿಂದ ನಡೆಯಲಿದೆ
UPDATE - Prasidh Krishna added to India’s squad
— BCCI (@BCCI) September 1, 2021
More details here - https://t.co/Bun5KzLw9G #ENGvIND pic.twitter.com/IO4JWtmwnF