ಶಿವಮೊಗ್ಗ: ಪಿಇಎಸ್ ಶಿಕ್ಷಣ ಸಂಸ್ಥೆಗೆ ಸೇರಿದ ನಾಲ್ಕು ಬಸ್‌ಗಳಿಂದ ಡಿಸೇಲ್ ಕಳವು
Update: 2021-09-01 15:06 IST
ಶಿವಮೊಗ್ಗ : ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕುಟುಂಬದ ಒಡೆತನ ಹೊಂದಿರುವ ಪಿಇಎಸ್ ಶಿಕ್ಷಣ ಸಂಸ್ಥೆಗಳಿಗೆ ಸೇರಿದ ನಾಲ್ಕು ಬಸ್‌ಗಳಿಂದ ಸುಮಾರು 580 ಲೀಟರ್ ಡೀಸೆಲ್ ಕಳುವಾಗಿದೆ.
ಶಿವಮೊಗ್ಗ ನಗರದ ಸೋಮಿನಕೊಪ್ಪದ ಮೈತ್ರಿ ಅಪಾರ್ಟ್‌ಮೆಂಟ್ ಬಳಿ ಶಿಕ್ಷಣ ಸಂಸ್ಥೆ ಆವರಣದಲ್ಲಿ ನಿಲ್ಲಿಸಿದ್ದ ಬಸ್‌ಗಳಿಂದ ಡೀಸೆಲ್ ಕಳವು ನಡೆದಿದ್ದು, ಎರಡು ದೊಡ್ಡ ಬಸ್ ಮತ್ತು ಎರಡು ಮಿನಿ ಬಸ್‌ಗಳಿಂದ ತಡರಾತ್ರಿ ವೇಳೆ ಡೀಸೆಲ್ ತೆಗೆಯಲಾಗಿದೆ.
ಈ ಬಸ್‌ಗಳು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕುಟುಂಬದ ಒಡೆತನ ಹೊಂದಿರುವ ಪಿಇಎಸ್ ಶಿಕ್ಷಣ ಸಂಸ್ಥೆಗಳಿಗೆ ಸೇರಿವೆ. ವಿನೋಬನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ದಾಖಲಾಗಿದೆ.