ಬೆಂಗಳೂರು: ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಇಬ್ಬರ ಕೊಲೆ
Update: 2021-09-01 15:21 IST
ಬೆಂಗಳೂರು, ಸೆ.1: ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿರುವ ದುಷ್ಕರ್ಮಿಗಳು ಇಬ್ಬರನ್ನು ಕೊಲೆಗೈದಿರುವ ಘಟನೆ ಇಲ್ಲಿನ ಹೆಬ್ಬಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಇಬ್ಬರು ಸುಮಾರು 35 ವರ್ಷ ವಯಸ್ಸಿನವರಾಗಿದ್ದು, ಅವರ ಹೆಸರು ವಿಳಾಸ ಸದ್ಯಕ್ಕೆ ತಿಳಿದುಬಂದಿಲ್ಲ ಎಂದು ಪೊಲೀಸರು ಹೇಳಿದ್ದಾರೆ.
ಕೊಲೆಯಾದವರು ಮೇಲ್ನೋಟಕ್ಕೆ ಉತ್ತರ ಭಾರತದ ವಲಸೆ ಕಾರ್ಮಿಕರಂತೆ ಕಾಣುತ್ತಿದ್ದು, ಬುಧವಾರ ಬೆಳಗ್ಗೆ ಮೃತದೇಹಗಳನ್ನು ನೋಡಿದ ಸ್ಥಳೀಯರು ಪೊಲೀಸರಿಗೆ ಮಾಹಿತಿಯನ್ನು ನೀಡಿದ್ದಾರೆ. ತಕ್ಷಣವೇ ಸ್ಥಳಕ್ಕೆ ಹೆಬ್ಬಗೋಡಿ ಪೊಲೀಸರ ಭೇಟಿ ಪರಿಶೀಲನೆ ನಡೆಸಿದ್ದು, ಕೃತ್ಯ ನಡೆದ ಮೃತದೇಹಗಳ ಬಳಿ ಬಿದ್ದಿರುವ ಮದ್ಯದ ಬಾಟಲಿಗಳನ್ನು ವಶಕ್ಕೆ ತೆಗೆದುಕೊಂಡು ತನಿಖೆಯನ್ನು ಕೈಗೊಂಡಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಹೇಳಿದ್ದಾರೆ.