ಮೈಸೂರು ಅತ್ಯಾಚಾರ ಪ್ರಕರಣ: ಘಟನಾ ಸ್ಥಳಕ್ಕೆ ಸಿದ್ದರಾಮಯ್ಯ ಭೇಟಿ

Update: 2021-09-01 14:57 GMT

ಮೈಸೂರು: ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಘಟನಾ ಸ್ಥಳಕ್ಕೆ ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಭೇಟಿ ನೀಡಿ ಪರಿಶೀಲಿಸಿದರು.

ಈ ವೇಳೆ ಆಲನಹಳ್ಳಿ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ರವಿಶಂಕರ್ ಅವರನ್ನು  ತರಾಟೆಗೆ ತೆಗೆದುಕೊಂಡ ಸಿದ್ದರಾಮಯ್ಯ, ಕಾನೂನು ಸುವ್ಯವಸ್ಥೆ ಬಗ್ಗೆ ಕಟ್ಟುನಿಟ್ಟಿನ ಕ್ರಮ ಜರುಗಿಸಬೇಕು ಎಂದು ಸೂಚಿಸಿದರು.

ಈ ವೇಳೆ ಮಾಜಿ ಸಚಿವರಾದ ಡಾ.ಎಚ್.ಸಿ.ಮಹದೇವಪ್ಪ, ಮಾಜಿ ಶಾಸಕ ಎಂ.ಕೆ‌.ಸೋಮಶೇಖರ್, ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಚೆ ಡಾ.ಪುಷ್ಪಾಅಮರ್ನಾಥ್, ನಗರ ಕಾಂಗ್ರೆಸ್ ಅಧ್ತಕ್ಷ ಆರ್.ಮೂರ್ತಿ ,ಜಿಲ್ಲಾ ಗ್ರಾಮಾಂತರ ಕಾಂಗ್ರೆಸ್ ಅಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್  ಸೇರಿದಂತೆ ಹಲವರು ಉಒಸ್ಥಿತರಿದ್ದರು

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News