×
Ad

ಜೆಡಿಎಸ್‍ನವರು ದುಡ್ಡಿಗಾಗಿ ರಾಜಕಾರಣ ಮಾಡುತ್ತಾರೆ: ನಳಿನ್ ಕುಮಾರ್ ತಿರುಗೇಟು

Update: 2021-09-01 21:03 IST

ಮೈಸೂರು,ಸೆ.1: ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ದುಡ್ಡು ವಸೂಲಿಗಾಗಿ ಕರ್ನಾಟಕಕ್ಕೆ ಬರುತ್ತಾರೆಂದು ಟೀಕೆ ಮಾಡಿದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ ಕುಮಾರ್ ಟಾಂಗ್ ನೀಡಿದ್ದಾರೆ.

ನಗರದಲ್ಲಿ ಬುಧವಾರ ಮಾಧ್ಯಮದವರೊಂದಿಗೆ ಮಾತನಾಡಿ ತಿರುಗೇಟು ನೀಡಿದ ಅವರು, ಜೆಡಿಎಸ್ ನವರು ದುಡ್ಡಿಗಾಗಿ ರಾಜಕಾರಣ ಮಾಡುತ್ತಾರೆ. ಅವರ ಅನುಭವನ್ನ ಅವರು ಹೇಳಿಕೊಂಡಿದ್ದಾರೆ. ಈ ಸಂಸ್ಕೃತಿ ಜೆಡಿಎಸ್ ಸಂಸ್ಕೃತಿ. ಹಳದಿ ರೋಗದವರಿಗೆ ನೋಡಿದ್ದೆಲ್ಲಾ ಹಳದಿಯಾಗಿ ಕಾಣಿಸುತ್ತದೆ. ಇವರು ರಾಜ್ಯವನ್ನು, ದೇಶವನ್ನು ಆಳಿದವರು. ಇವರಿಗೆ ಎಲುಬು ನಾಲಿಗೆ ಸರಿಯಾಗಿದ್ದರೇ ಜೆಡಿಎಸ್ ಗೆ ಇಂತಹ ಪರಿಸ್ಥಿತಿ ಬರುತ್ತಿರಲಿಲ್ಲ. ಜೆಡಿಎಸ್ ನವರು ಆಡುವಂತಹ ಮಾತುಗಳನ್ನು ಬಿಜೆಪಿ ಯವರು ಆಡುವುದಿಲ್ಲ. ಜೆಡಿಎಸ್ ನ ಪರಿಸ್ಥಿತಿ ಏನೆಂಬುದು ರಾಜ್ಯದ ಜನರಿಗೆ ಗೊತ್ತಿದೆ ಎಂದು ವಾಗ್ದಾಳಿ ನಡೆಸಿದರು.

ತೈಲಬೆಲೆ ಏರಿಕೆ ವಿಚಾರ ಕುರಿತು ಪ್ರತಿಕ್ರಿಯಿಸಿದ ನಳೀನ್ ಕುಮಾರ್ ಕಟೀಲ್,  ಅಂತರರಾಷ್ಟ್ರೀಯ ಮಟ್ಟಕ್ಕೆ ಅನುಗುಣವಾಗಿ ಇಂಧನ ಬೆಲೆ ಪರಿಷ್ಕರಣೆ ಆಗುತ್ತದೆ. ಬೆಲೆ ಏರಿಕೆಗೆ ಸಂಬಂಧಿಸಿದಂತೆ ಯುಪಿಎ ಸರ್ಕಾರದ ಅವಧಿ ಹಾಗೂ ಈಗಿನ ಪರಿಸ್ಥಿತಿಯನ್ನು ತುಲನಾತ್ಮಕವಾಗಿ ಅವಲೋಕನ ಮಾಡಲಿ. ಅಡುಗೆ ಅನಿಲ ಬೆಲೆ ಏರಿಕೆ ನಿಯಂತ್ರಣ ಮಾಡಲು ಏನೆಲ್ಲಾ ಪ್ರಯತ್ನ ಮಾಡಬೇಕೋ ಅದನ್ನು ಅಂತರಾಷ್ಟ್ರೀಯ ಮಾರುಕಟ್ಟೆಗೆ ಅನುಗುಣವಾಗಿ ಮಾಡುತ್ತಿದ್ದೇವೆ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News