×
Ad

ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎನ್.ಎಲ್.ತಮ್ಮಯ್ಯ ನಿಧನ

Update: 2021-09-01 21:39 IST

ಮೈಸೂರು,ಸೆ.1: ಜಿಲ್ಲೆಯ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎನ್.ಎಲ್.ತಮ್ಮಯ್ಯ(90) ಬುಧವಾರ ಮೈಸೂರು ನಗರದಲ್ಲಿ ನಿಧನರಾಗಿದ್ದಾರೆ.

ಮೈಸೂರು ಜಿಲ್ಲೆ ಕೆ.ಆರ್.ನಗರ ತಾಲ್ಲೂಕಿನ ಬೇರ್ಯ ಹೋಬಳಿ ನರಚನಹಳ್ಳಿ ಗ್ರಾಮದವರಾದ ತಮ್ಮಯ್ಯ ಸ್ವಾತಂತ್ರ್ಯ ಹೋರಾಟದ ಚಳುವಳಿಯಲ್ಲಿ ಭಾಗವಹಿಸಿದ್ದರು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಮೈಸೂರಿನಲ್ಲಿರುವ ಅವರ ಹಿರಿಯ ಪುತ್ರನ ನಿವಾಸದಲ್ಲಿ ಅಸುನೀಗಿದ್ದಾರೆ.

ಮೃತರು ಪತ್ನಿ, ಮೂವರು ಪುತ್ರರು, ಓರ್ವ ಪುತ್ರಿ ಸೇರಿದಂತೆ ಅಪಾರ ಬಂಧುಬಳಗವನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ಗುರುವಾರ ಮಧ್ಯಾಹ್ನ 2 ಗಂಟೆಗೆ ಅವರ ಸ್ವಗ್ರಾಮ ನರಚನಹಳ್ಳಿ ಗ್ರಾಮದ ಅವರ ಜಮೀನಿನಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News