ಲಿಂಗಾಯತ ಪ್ರತ್ಯೇಕ ಧರ್ಮ ಹೋರಾಟ ಮುಂದುವರಿಯಲಿದೆ: ಮಾಜಿ ಸಚಿವ ಎಂ.ಬಿ.ಪಾಟೀಲ್

Update: 2021-09-01 17:51 GMT

ಬೆಂಗಳೂರು, ಸೆ.1: ಪ್ರತ್ಯೇಕ ಲಿಂಗಾಯತ ಧರ್ಮ ಆದರೆ ನಮಗೆ ಹೆಚ್ಚಿನ ಸೌಲಭ್ಯ ಸಿಗುತ್ತದೆ. ವೀರಶೈವರನ್ನು ಸೇರಿಸಿಕೊಂಡು ಈ ನಿಟ್ಟಿನಲ್ಲಿ ಮುಂದುವರೆಯುತ್ತೇವೆ ಎಂದು ಮಾಜಿ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.

ಬುಧವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಂಚಪೀಠದವರು ಎಲ್ಲರೂ ಸೇರಿ ಬಸವ ಧರ್ಮ ಆಗಬೇಕು ಎಂದು ಹೇಳಿದರು.

ನಮ್ಮ ಚುನಾವಣಾ ಸೋಲಿಗೆ ಪ್ರತ್ಯೇಕ ಲಿಂಗಾಯತ ಧರ್ಮ ಕಾರಣವಲ್ಲ. ಪಂಚಮಸಾಲಿ ಮೀಸಲಾತಿಗೆ ಹೋರಾಟ ನಡೆಯುತ್ತಿದೆ. ಬಸವ ಧರ್ಮ ಪ್ರತ್ಯೇಕ ಧರ್ಮ ಆದರೆ ಮುಸ್ಲಿಂ, ಜೈನ ಮಾದರಿಯಲ್ಲಿ ಅಲ್ಪಸಂಖ್ಯಾತ ಸ್ಥಾನಮಾನ ಸಿಗುತ್ತದೆ. ಎಲ್ಲರಿಗೂ ಮೀಸಲಾತಿ ಸಿಗುತ್ತದೆ ಎಂಬುದನ್ನು ಮನಗಾಣಬೇಕಿದೆ ಎಂದು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News