ಹೆಚ್ಚಿನ ಶುಲ್ಕ ವಸೂಲಿಗೆ ಕ್ರಮ: ಶಿಕ್ಷಣ ಸಚಿವ ಬಿ.ಸಿ.ನಾಗೇಶ್

Update: 2021-09-02 13:48 GMT

ಬೆಂಗಳೂರು: ಕೆಲವು ಖಾಸಗಿ ಶಾಲೆಗಳು ಹೆಚ್ಚಿನ ಶುಲ್ಕ ವಸೂಲಿ ಮಾಡುತ್ತಿವೆ ಎಂಬ ಆರೋಪ ಕೇಳಿ ಬಂದಿದ್ದು, ಸರಕಾರ ನಿಗದಿಗೊಳಿಸಿರುವ ದರಕ್ಕಿಂತ ಹೆಚ್ಚು ಶುಲ್ಕವನ್ನು ವಸೂಲಿ ಮಾಡಿದರೆ ಅಂತಹ ಶಾಲೆ,ಕಾಲೇಜುಗಳ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ. 

ಗುರುವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, 'ನಗರ ಪ್ರದೇಶಗಳಲ್ಲಿ ಖಾಸಗಿ ಶಾಲೆಗಳಿಂದ ಈ ರೀತಿ ಸಮಸ್ಯೆ ಆಗುತ್ತಿದೆ. ಶಾಲಾ ಶುಲ್ಕಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶದಲ್ಲಿ ಈಗಾಗಲೇ ಒಂದು ಕಾನೂನು ತಂದಿದ್ದಾರೆ. ಆಂಧ್ರ ಮಾದರಿಯಲ್ಲಿ ಕಾನೂನು ರೂಪಿಸುವ ಬಗ್ಗೆ ಮುಖ್ಯಮಂತ್ರಿ ಜೊತೆ ಚರ್ಚೆ ಮಾಡಿ ನಿರ್ಧಾರ ಮಾಡಲಾಗುವುದು' ಎಂದು ಹೇಳಿದರು.

`ಸೆ.6ರಿಂದ ಆರು, ಏಳು ಮತ್ತು ಎಂಟನೆ ತರಗತಿ ಭೌತಿಕ ತರಗತಿಗಳನ್ನು ಆರಂಭಿಸಲು ಈಗಾಗಲೇ ಕ್ರಮ ವಹಿಸಿದ್ದು, ಶಾಲೆಗಳು ಸ್ಯಾನಿಟೈಜ್ ಮಾಡಲು ಸೂಚಿಸಲಾಗಿದೆ. ಮಕ್ಕಳ ಸುರಕ್ಷತೆ ಜೊತೆಗೆ ಕಲಿಕೆಗೆ ಆಸ್ಥೆ ವಹಿಸಿದ್ದು, ಯಾವುದೇ ರೀತಿಯ ತೊಂದರೆ ಆಗದಂತೆ ಎಲ್ಲ ರೀತಿಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿದೆ'

-ಬಿ.ಸಿ.ನಾಗೇಶ್ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News