×
Ad

ಮಂಗಳೂರು : ದುಷ್ಕರ್ಮಿಗಳ ತಂಡದಿಂದ ಯುವಕನಿಗೆ ಚೂರಿ ಇರಿತ

Update: 2021-09-02 23:58 IST

ಮಂಗಳೂರು: ನಗರದ ಹೊರವಲಯ ಎದುರುಪದವಿನಲ್ಲಿ ಕ್ಷುಲ್ಲಕ ಕಾರಣಕ್ಕೆ ದುಷ್ಕರ್ಮಿಗಳ ತಂಡವೊಂದು ಯುವಕನಿಗೆ ಚೂರಿಯಿಂದ ಇರಿದ ಘಟನೆ ಗುರುವಾರ ತಡರಾತ್ರಿ ನಡೆದಿದೆ.

ಬಾಗಲಕೋಟೆ ಮೂಲದ ನಿಂಗಣ್ಣ ಚೂರಿ ಇರಿತಕ್ಕೊಳಗಾದ ವ್ಯಕ್ತಿ ಎಂದು ತಿಳಿದುಬಂದಿದೆ.

ಕುಡಿದ ಮತ್ತಿನಲ್ಲಿ ನಿಂಗಣ್ಣ ಹಾಗೂ ತಂಡವೊಂದರ ಮಧ್ಯೆ ಮಾತಿನ ಚಕಮಕಿ ನಡೆದಿದೆ. ಕ್ಷುಲ್ಲಕ ಕಾರಣಕ್ಕೆ ಆರಂಭವಾದ ಜಗಳ ಚೂರಿ ಇರಿತದವರೆಗೆ ತಲುಪಿದೆ ಎಂದು ತಿಳಿದುಬಂದಿದೆ.

ತಂಡವು ನಿಂಗಣ್ಣ ಅವರ ತಲೆಗೆ ಚೂರಿ‌ ಇರಿದಿದೆ. ಪರಿಣಾಮ ಸ್ಥಳದಲ್ಲೇ ತೀವ್ರ ರಕ್ತಸ್ರಾವವಾಗಿದೆ. ಸ್ಥಳೀಯರು ಗಾಯಾಳುವನ್ನು ನಗರದ ಜಿಲ್ಲಾ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಘಟನಾ ಸ್ಥಳಕ್ಕೆ ಹಾಗೂ ವೆನ್ಲಾಕ್ ಆಸ್ಪತ್ರೆಗೆ ಕಾವೂರು ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News