ಬೆಂಗಳೂರಿನಲ್ಲಿ ಸಿಸಿಬಿ ಪೊಲೀಸರ ಕಾರ್ಯಾಚರಣೆ: 2 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ; ಇಬ್ಬರ ಬಂಧನ

Update: 2021-09-03 06:01 GMT

ಬೆಂಗಳೂರು, ಸೆ.3- ಮಾದಕ ವಸ್ತುಗಳ ಮಾರಾಟಗಾರರ ಮೇಲೆ ತೀವ್ರ ನಿಗಾವಹಿಸಿರುವ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ, ಬರೋಬ್ಬರಿ 2 ಕೋಟಿ‌ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿದ್ದಾರೆ.

ಈ ಪ್ರಕರಣ ಸಂಬಂಧ ಹೊರ ರಾಜ್ಯದ ಇಬ್ಬರನ್ನು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ.

ವಿದೇಶದಿಂದ ಡಾರ್ಕ್‌ನೆಟ್ ಜಾಲತಾಣಗಳ ಮೂಲಕ ಮಾದಕ ವಸ್ತುಗಳನ್ನು ತರಿಸಿಕೊಂಡು ನಗರದಲ್ಲಿ ಮಾರಾಟ ಮಾಡುತ್ತಿದ್ದ ಬಗ್ಗೆ ಮಾಹಿತಿ ಸಂಗ್ರಹಿಸಿ ಇಲ್ಲಿನ ವೈಟ್‌ಫೀಲ್ಡ್ ವಿಭಾಗದಲ್ಲಿ ಕಾರ್ಯಾಚರಣೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.

ನಗರದ ಬಾಡಿಗೆ ಮನೆಯಲ್ಲಿ ವಾಸವಿದ್ದ ಆರೋಪಿಗಳು, ಇಲ್ಲಿಯೇ ಎಂಡಿಎಂಎ, ಎಕ್ಸೈ‌ಟೆಸ್ಸಿ ಮಾತ್ರೆಗಳು, ಗಾಂಜಾ ಎಣ್ಣೆ ಹಾಗೂ ಇತರೆ ಮಾದಕ ವಸ್ತುಗಳನ್ನು ಶೇಖರಣೆ ಮಾಡಿದ್ದರು.ಸದ್ಯ ಇದನ್ನು ವಶಕ್ಕೆ ತೆಗೆದುಕೊಂಡು, ತನಿಖೆ ಮುಂದುವರೆಸಲಾಗಿದೆ ಎಂದು ಸಿಸಿಬಿ ಹೇಳಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News