ಪಕ್ಷದಲ್ಲಿ ಬಿಎಸ್ ವೈ, ಜಗದೀಶ್ ಶೆಟ್ಟರ್ ಅವರನ್ನು ಕಡೆಗಣಿಸುವ ಪ್ರಶ್ನೆಯೇ ಇಲ್ಲ: ಪ್ರಹ್ಲಾದ್ ಜೋಶಿ

Update: 2021-09-03 09:07 GMT
ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ಹುಬ್ಬಳ್ಳಿ,ಸೆ.3: 'ಪಕ್ಷದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹಾಗೂ ಜಗದೀಶ್ ಶೆಟ್ಟರ್ ಅವರನ್ನು ಕಡೆಗಣಿಸುವ ಪ್ರಶ್ನೆಯೇ ಇಲ್ಲ.' ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ . 

ಹುಬ್ಬಳ್ಳಿ-ಧಾರವಾಡ ಮಹಾ ನಗರ ಪಾಲಿಕೆ ಚುನಾವಣೆಗೆ ಆಗಮಿಸಿ ಮತಚಲಾಯಿಸಿದ ಪ್ರಹ್ಲಾದ್ ಜೋಶಿ ಸುದ್ದಿಗಾರರ ಜೊತೆ ಮಾತನಾಡಿದರು. 'ಬಸವರಾಜ ಬೊಮ್ಮಾಯಿ ಅವರು, ಮುಖ್ಯಮಂತ್ರಿಯಾಗಿ ಉತ್ತಮ ಆಡಳಿತ ನೀಡುತ್ತಿದ್ದು, ಅವರ ನೇತೃತ್ವದಲ್ಲೇ ಮುಂದಿನ ಚುನಾವಣೆ ಎದುರಿಸಲಿದ್ದೇವೆ. ಇನ್ನು ಸಿಎಂ ಆಗಿರುವವರ ನೇತೃತ್ವದಲ್ಲಿ ಚುನಾವಣೆ ಎದುರಿಸುವುದು ಸಾಮಾನ್ಯವಾಗಿದೆ ಎಂದ ಅವರು, ಗೃಹ ಸಚಿವ ಅಮಿತ್ ಶಾ ಕೂಡ ಇದನ್ನೇ ಹೇಳಿದ್ದಾರೆ ಎಂದು ತಿಳಿಸಿದರು. 

ಹಿರಿಯ ನಾಯಕರ ರಾಜಕೀಯ ಅನುಭವವನ್ನು ಮುಂದಿನ ದಿನಗಳಲ್ಲಿ ಪಕ್ಷ ಸಮರ್ಪಕವಾಗಿ ಬಳಸಿಕೊಳ್ಳಲಿದೆ ಎಂದು ಇದೇ ವೇಳೆ ತಿಳಿಸಿದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News