ತಾಲಿಬಾನ್ ಸಮಸ್ಯೆಯಿಂದಾಗಿ ತೈಲ ಬೆಲೆ ಏರಿಕೆಯಾಗಿದೆ: ಶಾಸಕ ಅರವಿಂದ ಬೆಲ್ಲದ್

Update: 2021-09-03 10:10 GMT

ಧಾರವಾಡ: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ತಾತ್ಕಾಲಿಕ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಹೇಳಿಕೆ ಬೆನ್ನಲ್ಲೇ ಇದೀಗ ಹುಬ್ಬಳ್ಳಿ-ಧಾರವಾಡ ಪಶ್ಚಿಮ ಕ್ಷೇತ್ರದ  ಶಾಸಕ ಅರವಿಂದ ಬೆಲ್ಲದ್ 'ತಾಲಿಬಾನ್ ಸಮಸ್ಯೆಯಿಂದಾಗಿ ತೈಲ ಬೆಲೆ ಏರಿಕೆಯಾಗಿದೆ' ಎಂಬ ಹೇಳಿಕೆ ನೀಡಿದ್ದಾರೆ. 

ಹುಬಳ್ಳಿ-ಧಾರವಾಡ ಮಹಾನಗರ ಪಾಲಿಕೆಗೆ ಚುನಾವಣೆ ನಡೆಯುತ್ತಿದ್ದು, ಮತ ಚಲಾಯಿಸಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, 'ತಾಲಿಬಾನ್ ಸಮಸ್ಯೆಯಿಂದಾಗಿಯೇ ಅಂತರ್ ರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾ ತೈಲ ಪೂರೈಕೆಯಲ್ಲಿ ವ್ಯತ್ಯಯವಾಗಿದೆ. ಇದರಿಂದ ಬಾರತದಲ್ಲಿ ಅನಿವಾರ್ಯವಾಗಿ ತೈಲ ಬೆಲೆ ಏರಿಕೆಯಾಗಿದೆ' ಎಂದು ಶಾಸಕ ಅರವಿಂದ ಬೆಲ್ಲದ್ ಹೇಳಿದ್ದಾರೆ. 

ಇನ್ನು ಮತದಾರರು ಪ್ರಬುದ್ಧರಾಗಿದ್ದು, ಅಂತರ್ ರಾಷ್ಟ್ರೀಯ ವಿದ್ಯಮಾನಗಳನ್ನು ಅರ್ಥಮಾಡಿಕೊಂಡು ಬೆಲೆ ಏರಿಕೆಯ ಕಾರಣವನ್ನುತಿಳಿದುಕೊಳ್ಳುತ್ತಾರೆ ಎಂದು ಹೇಳಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News