×
Ad

ಉಡುಪಿಯಲ್ಲಿ ಶೇ.79ರಷ್ಟು ಮಂದಿಗೆ ಪ್ರಥಮ ಡೋಸ್: ಡಿಸಿ ಕೂರ್ಮಾ ರಾವ್

Update: 2021-09-03 19:07 IST

ಉಡುಪಿ, ಸೆ.3: ಕೋವಿಡ್‌ನ ಅಪಾಯದಿಂದ ರಕ್ಷಿಸಿಕೊಳ್ಳಲು ಲಸಿಕೆ ಪಡೆ ಯುವುದು ಅಗತ್ಯವಾಗಿದ್ದು, ಜಿಲ್ಲೆಯಲ್ಲಿ ಕೋವಿಡ್ ನಿರ್ಮೂಲನೆ ಮಾಡಲು ಪ್ರತಿಯೊಬ್ಬ ನಾಗರೀಕರೂ ತಪ್ಪದೆ ಲಸಿಕೆ ಪಡೆಯಬೇಕು. ಜಿಲ್ಲೆಯಲ್ಲಿ ಈಗಾಗಲೇ ಶೇ.79ರಷ್ಟು ಮಂದಿಗೆ ಪ್ರಥಮ ಡೋಸ್ ಲಸಿಕೆ ನೀಡಲಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಕೂರ್ಮಾ ರಾವ್ ಎಂ. ತಿಳಿಸಿದ್ದಾರೆ.

ನಗರದ ಅಮ್ಮಣಿ ರಾಮಣ್ಣ ಹಾಲ್‌ನಲ್ಲಿ ಹಮ್ಮಿಕೊಳ್ಳಲಾಗಿರುವ ಕೋವಿಡ್ ಲಸಿಕಾಕರಣ ಕೇಂದ್ರಕ್ಕೆ ಶುಕ್ರವಾರ ಭೇಟಿ ನೀಡಿ, ಅಲ್ಲಿನ ಸಿದ್ಧತೆಗಳ ಕುರಿತು ಮೆಚ್ಚುಗೆ ವ್ಯಕ್ತಪಡಿಸಿ ಅವರು ಮಾತನಾಡುತ್ತಿದ್ದರು.

ಜಿಲ್ಲೆಯಲ್ಲಿ ಕೋವಿಡ್ ಲಸಿಕಾಕರಣ ಕಾರ್ಯಕ್ರಮವು ಅತ್ಯುತ್ತಮವಾಗಿ ನಡೆಯುತ್ತಿದ್ದು, ಈ ಕಾರ್ಯದಲ್ಲಿ ಜನಪ್ರತಿನಿಧಿಗಳು ಮತ್ತು ವಿವಿಧ ಸಂಘ ಸಂಸ್ಥೆಗಳು ಉತ್ತಮ ಸಹಕಾರ ನೀಡುತ್ತಿದ್ದಾರೆ. ಈ ಲಸಿಕಾ ಕೇಂದ್ರದಲ್ಲಿ 500 ಮಂದಿ ಸಾರ್ವಜನಿಕರಿಗೆ ಲಸಿಕೆ ನೀಡಲು ವ್ಯವಸ್ಥೆ ಮಾಡಿದ್ದು, ಸ್ಥಳದಲ್ಲಿ ಸಾಮಾಜಿಕ ಅಂತರ ಪಾಲನೆ, ಕುಳಿತುಕೊಳ್ಳಲು ಸೂಕ್ತ ವ್ಯವಸ್ಥೆ ಮಾಡಲಾಗಿದೆ ಎಂದು ಅವರು ಹೇಳಿದರು.

ನಗರಸಭಾ ಸದಸ್ಯರಾದ ರಮೇಶ್ ಕಾಂಚನ್, ವಿಜ ಪೂಜಾರಿ, ಡಿಹೆಚ್‌ಓ ಡಾ.ನಾಗಭೂಷಣ ಉಡುಪ, ಉಡುಪಿ ತಾಲೂಕು ಆರೋಗ್ಯಾಧಿಕಾರಿ ಡಾ. ವಾಸುದೇವ ಉಪಾಧ್ಯಾಯ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ನಾಗರತ್ನ, ಕೋವಿಡ್ ನೋಡಲ್ ಅಧಿಕಾರಿ ಡಾ.ಪ್ರಶಾಂತ್ ಭಟ್, ಕೋವಿಡ್ ಲಸಿಕಾ ನೋಡೆಲ್ ಅಧಿಕಾರಿ ಡಾ.ಎಂ.ಜಿ.ರಾಮ ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News