×
Ad

ಪೋಷಕರು ಶಾಲೆಯೊಂದಿಗೆ ನಿರಂತರ ಸಂಪರ್ಕ ಅಗತ್ಯ: ರಶ್ಮಿ ಭಟ್

Update: 2021-09-03 19:15 IST

ಉಡುಪಿ, ಸೆ.3: ಪೋಷಕರು ತಮ್ಮ ಮಕ್ಕಳನ್ನು ಶಾಲೆಗೆ ಸೇರಿಸಿ ಅಥವಾ ಮೊಬೈಲ್ ತೆಗೆಸಿಕೊಟ್ಟು ಸುಮ್ಮನಾದರೆ ಸಾಲದು. ಮಕ್ಕಳ ವರ್ತನೆ ಯನ್ನು ಗಮನಿಸುತ್ತ ಶಾಲೆಯೊಂದಿಗೆ ನಿರಂತರ ಸಂಪರ್ಕದಲ್ಲಿರಬೇಕು. ಆಗ ಮಾತ್ರ ಸಾಧನೆ ಮಾಡಲು ಶಿಕ್ಷಕರು ಮಕ್ಕಳನ್ನು ಪ್ರೇರೇಪಿಸ ಬಹುದು ಎಂದು ಉಡುಪಿ ನಗರಸಭಾ ಸದಸ್ಯೆ ರಶ್ಮಿ ಸಿ.ಭಟ್ ಹೇಳಿದ್ದಾರೆ.

ಉಡುಪಿ ಬಾಲಕಿಯರ ಸರಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗಲ್ಲಿ ನಡೆದ ಪ್ರತಿಭಾ ಪುರಸ್ಕಾರ ಮತ್ತು ಪೋಷಕರ ಸಭೆಯನ್ನು ಉದ್ದೆೀಶಿಸಿ ಅವರು ಮಾತನಾಡುತ್ತಿದ್ದರು.

ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ರುದ್ರೇ ಗೌಡ ವಹಿಸಿದ್ದರು. ಕ್ಷೇತ್ರ ಶಿಕ್ಷಣಾಧಿಕಾರಿ ನಾಗೇಂದ್ರಪ್ಪ, ಎಸ್‌ಡಿಎಂಸಿ ಉಪಾಧ್ಯಕ್ಷೆ ತಾರಾ ದೇವಿ ಅತಿಥಿ ಗಳಾಗಿದ್ದರು. ಎಸೆಸೆಲ್ಸಿಯಲ್ಲಿ ರಾಜ್ಯದಲ್ಲೇ ಅತಿ ಹೆಚ್ಚು ಅಂಕ ಗಳಿಸಿ ಪ್ರಥಮ ಸ್ಥಾನಿಯಾದ ಸಮತಾ ಹಾಗೂ ಇಪ್ಪತ್ತು ಮಂದಿ ಸಾಧಕ ವಿದ್ಯಾರ್ಥಿನಿಯರನ್ನು ಸನ್ಮಾನಿಸಲಾಯಿತು.

ಇದೇ ಸಂದರ್ಭದಲ್ಲಿ ಈ ಶೈಕ್ಷಣಿಕ ವರ್ಷದ ಪಠ್ಯ ಪುಸ್ತಕಗಳನ್ನು ವಿತರಿಸ ಲಾಯಿತು. ಎಸ್‌ಡಿಎಂಸಿ ಹೊಸ ಸದಸ್ಯರನ್ನೂ ಕೂಡ ಆಯ್ಕೆ ಮಾಡಲಾಯಿತು. ಮುಖ್ಯ ಶಿಕ್ಷಕಿ ಜಯಲಕ್ಷ್ಮಿ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಶಿಕ್ಷಕ ರಾಮಚಂದ್ರ ಭಟ್ ಕಾರ್ಯಕ್ರಮ ನಿರೂಪಿಸಿದರು. ಶೇಖರ್ ಬೋವಿ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News