ಉಡುಪಿ ಜಿಲ್ಲೆಯ 150 ಮಂದಿಯಲ್ಲಿ ಕೊರೋನ ಪಾಸಿಟಿವ್ ದೃಢ
ಉಡುಪಿ, ಸೆ.3: ಜಿಲ್ಲೆಯಲ್ಲಿ ಶುಕ್ರವಾರ ಹೊಸದಾಗಿ 150 ಮಂದಿಯಲ್ಲಿ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ದಿನದಲ್ಲಿ 145 ಮಂದಿ ಸೋಂಕಿ ನಿಂದ ಚೇತರಿಸಿಕೊಂಡರೆ, ಸೋಂಕಿಗೆ ಸಕ್ರಿಯರಾಗಿರುವವರ ಸಂಖ್ಯೆ ದಿನದಲ್ಲಿ 1413ರಷ್ಟಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗಭೂಷಣ ಉಡುಪ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಇಂದು ಕೋವಿಡ್‌ಗೆ ಯಾರೂ ಬಲಿಯಾಗಿಲ್ಲ. ಕೊರೋನ ಸೋಂಕು ದೃಢಪಟ್ಟ 150 ಮಂದಿಯಲ್ಲಿ 73 ಮಂದಿ ಪುರುಷರು ಹಾಗೂ 77 ಮಂದಿ ಮಹಿಳೆಯರು. ಪಾಸಿಟಿವ್ ಬಂದವರಲ್ಲಿ 87 ಮಂದಿ ಉಡುಪಿ ತಾಲೂಕು, 29 ಮಂದಿ ಕುಂದಾಪುರ ಹಾಗೂ 33 ಮಂದಿ ಕಾರ್ಕಳ ತಾಲೂಕಿ ನವರು. ಇವರಲ್ಲಿ 25 ಮಂದಿ ಕೋವಿಡ್ ಆಸ್ಪತ್ರೆ ಹಾಗೂ 125 ಮಂದಿ ಮನೆಗಳಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ.
ಗುರುವಾರ 150 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಈವರೆಗೆ ಕೊರೋನದಿಂದ ಚೇತರಿಸಿಕೊಂಡವರ ಸಂಖ್ಯೆ 72,376ಕ್ಕೇರಿದೆ. ನಿನ್ನೆ ಜಿಲ್ಲೆಯಲ್ಲಿ 7211 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಈವರೆಗೆ ಜಿಲ್ಲೆಯಲ್ಲಿ ಸೋಂಕಿಗೆ ಪಾಸಿಟಿವ್ ಬಂದವರ ಸಂಖ್ಯೆ 74,245ಕ್ಕೇರಿದೆ. ಉಡುಪಿ ಜಿಲ್ಲೆಯಲ್ಲಿ ಈವರೆಗೆ ಒಟ್ಟು 9,93,754 ಮಂದಿಯನ್ನು ಕೋವಿಡ್ ಪರೀಕ್ಷೆಗೊಳ ಪಡಿಸಲಾಗಿದೆ.
ಬ್ಲ್ಯಾಕ್ ಫಂಗಸ್ ಯಾರೂ ಇಲ್ಲ: ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದ ಹೊರ ಜಿಲ್ಲೆಯ ಒಬ್ಬರು ಬ್ಲಾಕ್ ಫಂಗಸ್ ಸೋಂಕಿನಿಂದ ಮೃತಪಟ್ಟಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಬ್ಲ್ಯಾಕ್ ಫಂಗಸ್‌ಗೆ ಒಟ್ಟು ಆರು ಮಂದಿ ಮೃತ ಪಟ್ಟಂತಾಯಿತು. ಇವರಲ್ಲಿ ಇಬ್ಬರು ಮಾತ್ರ ಉಡುಪಿ ಜಿಲ್ಲೆಯವರಾಗಿದ್ದು ಉಳಿದವರು ಹೊರಜಿಲ್ಲೆಯವರು. ಸದ್ಯ ಜಿಲ್ಲೆಯಲ್ಲಿ ಯಾರೂ ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿಲ್ಲ.
11,465 ಡೋಸ್ ಲಸಿಕೆ ವಿತರಣೆ: ಜಿಲ್ಲೆಯಲ್ಲಿ ಶುಕ್ರವಾರ 11,465 ಮಂದಿ ಕೋವಿಡ್-19 ಲಸಿಕೆಯನ್ನು ಪಡೆದಿದ್ದಾರೆ. ಇವರಲ್ಲಿ 7,022 ಮಂದಿ ಮೊದಲ ಡೋಸ್ ಹಾಗೂ 4443 ಮಂದಿ ಎರಡನೇ ಡೋಸ್‌ನ್ನು ಸ್ವೀಕರಿಸಿ ದ್ದಾರೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ನಾಗಭೂಷಣ ಉಡುಪ ತಿಳಿಸಿದ್ದಾರೆ.
18ರಿಂದ 44ವರ್ಷದೊಳಗಿನ 4,937 ಮಂದಿ ಮೊದಲ ಹಾಗೂ 2,139 ಮಂದಿ ಎರಡನೇ ಡೋಸ್ ಪಡೆದಿದ್ದರೆ, 45 ವರ್ಷ ಮೇಲಿನ 2085 ಮಂದಿಗೆ ಮೊದಲ ಹಾಗೂ 2250 ಮಂದಿಗೆ ಎರಡನೇ ಡೋಸ್ ಲಸಿಕೆಯನ್ನು ನೀಡ ಲಾಗಿದೆ. ಅಲ್ಲದೇ 25 ಮಂದಿ ಆರೋಗ್ಯ ಕಾರ್ಯಕರ್ತರು ಮತ್ತು 29 ಮಂದಿ ಮುಂಚೂಣಿ ಕಾರ್ಯಕರ್ತರು ಸಹ ಇಂದು ಎರಡನೇ ಡೋಸ್ ಪಡೆದಿದ್ದಾರೆ.
ಗುರುವಾರ ಸಂಜೆಯವರೆಗೆ ಜಿಲ್ಲೆಯಲ್ಲಿ ಒಟ್ಟು 7,88,738 ಮಂದಿ ಮೊದಲ ಡೋಸ್‌ನ್ನು ಪಡೆದರೆ, 2,81,975 ಮಂದಿ ಎರೂ ಡೋಸ್‌ಗಳನ್ನು ಸ್ವೀಕರಿಸಿದ್ದಾರೆ.