ಸಜ್ಜನ್‌ಗೆ ಜಾಮೀನು ನೀಡಲು ಸುಪ್ರೀಂ ನಕಾರ

Update: 2021-09-03 18:02 GMT

ಹೊಸದಿಲ್ಲಿ, ಸೆ.3: ಅನಾರೋಗ್ಯದ ಕಾರಣಕ್ಕಾಗಿ ತನಗೆ ಮಧ್ಯಂತರ ಜಾಮೀನು ನೀಡಬೇಕೆಂದು ಕೋರಿ 1984ರ ಸಿಖ್ಖ್ ವಿರೋಧಿ ಗಲಭೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಕಾಂಗ್ರೆಸ್ ನಾಯಕ ಸಜ್ಜನ್ ಕುಮಾರ್ ಸಲ್ಲಿಸಿದ ಅರ್ಜಿಯನ್ನು ಸುಪ್ರೀಂಕೋರ್ಟ್ ಶುಕ್ರವಾರ ತಿರಸ್ಕರಿಸಿದೆ.

ಸಜ್ಜನ್‌ಕುಮಾರ್ ಅವರ ವೈದ್ಯಕೀಯ ದಾಖಲೆಗಳನ್ನು ರಿಶೀಲಿಸಿದ ಸರ್ವೋಚ್ಚ ನ್ಯಾಯಾಲಯವು ಹೊಸದಿಲ್ಲಿಯಲ್ಲಿರುವ ಸರಕಾರಿ ಆಸ್ಪತ್ರೆಯೊಂದರ ವೈದ್ಯರು ಅವನ್ನು ವೈದ್ಯಕೀಯ ತಪಾಸಣೆ ನಡೆಸಿರುವುದು ಮತ್ತು ಅವರ ಆರೋಗ್ಯ ಸ್ಥಿರ ಹಾಗೂ ಸುಧಾರಣೆಯಾಗಿರುವುದನ್ನು ಗಮನಿಸಿತು. ವೈದ್ಯಕೀಯ ಕಾರಣಗಳಿಗಾಗಿ ಸಜ್ಜನ್‌ಗೆ ಜಾಮೀನು ನೀಡಲು ತಾನು ಒಲವು ಹೊಂದಿಲ್ಲವೆಂದು ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್ ಹಾಗೂ ಎಂ.ಎಂ. ಸುಂದರೇಶನ್ ಅವರನ್ನೊಳಗೊಂಡ ನ್ಯಾಯಪೀಠ ತಿಳಿಸಿತು.

1984ರಲ್ಲಿ ದಿಲ್ಲಿಯಲ್ಲಿ ನಡೆದ ಸಿಖ್ಖ್ ವಿರೋಧಿ ಹಿಂಸಾಚಾರ ಪ್ರಕರಣದಲ್ಲಿ 75 ವರ್ಷದ ಸಜ್ಜನ್ ಕುಮಾರ್‌ಗೆ 2018ರ ಡಿಸೆಂಬರ್ 17ರಂದು ಜೀವಾವಧಿ ಶಿಕ್ಷೆ ವಿಧಿಸಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News