ಬಂಗಾಳ ಉಪಚುನಾವಣೆಗೆ ಮುನ್ನ ಟಿಎಂಸಿಗೆ ಸೇರ್ಪಡೆಗೊಂಡ ಬಿಜೆಪಿ ಶಾಸಕ ಸೌಮೆನ್ ರಾಯ್

Update: 2021-09-04 11:56 GMT
photo: ANI

ಕೋಲ್ಕತಾ: ಚುನಾವಣಾ ಆಯೋಗವು ಪಶ್ಚಿಮ ಬಂಗಾಳದಲ್ಲಿ ಉಪಚುನಾವಣೆ ದಿನಾಂಕಗಳನ್ನು ಘೋಷಿಸಿದ ದಿನವೇ ಭಾರತೀಯ ಜನತಾ ಪಕ್ಷದ (ಬಿಜೆಪಿ) ಶಾಸಕ ಸೌಮೆನ್ ರಾಯ್ ಶನಿವಾರ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಗೆ ಸೇರ್ಪಡೆಗೊಂಡರು.

ಕಲಿಯಗಂಜ್‌ನ ಬಿಜೆಪಿ ಶಾಸಕ ರಾಯ್  ಈ ಹಿಂದೆ ಟಿಎಂಸಿಯ ಸದಸ್ಯರಾಗಿದ್ದರು.

"ಬಿಜೆಪಿ ಶಾಸಕ ಸೌಮೆನ್ ರಾಯ್ ಬಂಗಾಳ  ಹಾಗೂ ಉತ್ತರ ಬಂಗಾಳದ ಅಭಿವೃದ್ಧಿಗೆ ನಮ್ಮೊಂದಿಗೆ ಸೇರಿಕೊಳ್ಳುತ್ತಿದ್ದಾರೆ. ಅವರು ಬಂಗಾಳದ ಸಂಸ್ಕೃತಿ ಹಾಗೂ  ಪರಂಪರೆಯನ್ನು ಹಾಗೆಯೇ ಉಳಿಸಿಕೊಳ್ಳಲು ಬಯಸುತ್ತಾರೆ" ಎಂದು  ಟಿಎಂಸಿ ನಾಯಕ ಪಾರ್ಥ ಚಟರ್ಜಿ ಹೇಳಿದರು.

 ಸೌಮೆನ್ ರಾಯ್ ಟಿಎಂಸಿಗೆ ಸೇರಿದ ಹಿನ್ನೆಲೆಯಲ್ಲಿ ರಾಜ್ಯ ವಿಧಾನಸಭೆಯಲ್ಲಿ ಬಿಜೆಪಿಯ ಸದಸ್ಯ ಬಲ 71 ಕ್ಕೆ ಇಳಿದಿದೆ. ಕಳೆದ ನಾಲ್ಕು ವಾರಗಳಲ್ಲಿ  ನಾಲ್ವರು ಬಿಜೆಪಿ ಶಾಸಕರು ಟಿಎಂಸಿಗೆ ಸೇರಿದ್ದಾರೆ.

ಪಶ್ಚಿಮ ಬಂಗಾಳ ವಿಧಾನಸಭೆಯಲ್ಲಿ ಖಾಲಿ ಇರುವ ಸಮ್ಸರ್‌ಗಂಜ್, ಜಂಗೀಪುರ ಹಾಗೂ ಭಬನಿಪುರ ಕ್ಷೇತ್ರಗಳಿಗೆ ಸೆಪ್ಟೆಂಬರ್ 30 ರಂದು ಉಪಚುನಾವಣೆ ನಡೆಸಲಾಗುವುದು ಎಂದು ಚುನಾವಣಾ ಆಯೋಗವು  ಶನಿವಾರ ಘೋಷಿಸಿತು. ಅಕ್ಟೋಬರ್ 3 ರಂದು ಮತ ಎಣಿಕೆ ನಡೆಯಲಿದೆ ಎಂದು ಆಯೋಗ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News