ಬಿಎಂಟಿಸಿ: ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣಕ್ಕೆ ಅವಕಾಶ

Update: 2021-09-04 13:13 GMT

ಬೆಂಗಳೂರು, ಸೆ.4: ಬಿಎಂಟಿಸಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ 6ರಿಂದ ಪದವಿವರೆಗಿನ ವಿದ್ಯಾರ್ಥಿಗಳು ಸಂಸ್ಥೆಯ ಮುಂದಿನ ಆದೇಶದವರೆಗೆ ಸಾರಿಗೆ ಬಸ್‍ಗಳಲ್ಲಿ ಉಚಿತವಾಗಿ ಸಂಚರಿಸಲು ಅವಕಾಶ ಕಲ್ಪಿಸಿದೆ.

ಸಾರಿಗೆ ಬಸ್‍ಗಳಲ್ಲಿ ಪ್ರಯಾಣಿಸುವ ವೇಳೆ ಹಳೆಯ ಪಾಸ್ ಹಾಗೂ 2021-22ನೇ ಸಾಲಿನ ಶಾಲಾ-ಕಾಲೇಜು ಶುಲ್ಕ, ಶಾಲೆಯ ಗುರುತಿನ ಚೀಟಿಯನ್ನು ನಿರ್ವಾಹಕರಿಗೆ ತೋರಿಸಬೇಕಾಗುತ್ತದೆ. ಮನೆಯಿಂದ ಶಾಲಾ-ಕಾಲೇಜು ಮಾರ್ಗದಲ್ಲಿ ಮಾತ್ರ ಪ್ರಯಾಣಿಸಲು ಮಾತ್ರ ಅನುಮತಿ ನೀಡಲಾಗಿದೆ.

ಇನ್ನು ಐಟಿಐ, ಡಿಪ್ಲೋಮ, ವೃತ್ತಿಪರ, ಸ್ನಾತಕೋತ್ತರ, ಪಿಎಚ್‍ಡಿ, ತಾಂತ್ರಿಕ ಹಾಗೂ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಗಳಿಗೆ 2020-21ನೇ ಸಾಲಿನ ವಿದ್ಯಾರ್ಥಿ ಪಾಸಿನ ಮಾನ್ಯತಾ ಅವಧಿಯನ್ನು ಸೆ.30ರವರೆಗೆ ವಿಸ್ತರಿಸಲಾಗಿದೆ ಎಂದು ಬಿಎಂಟಿಸಿ ಪ್ರಕಟನೆಯಲ್ಲಿ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News