×
Ad

ಬಂಟ್ವಾಳ: ಕಲ್ಲಿನ ಕೋರೆಯ ನೀರಿನಲ್ಲಿ ಮುಳುಗಿ ಬಾಲಕ ಮೃತ್ಯು

Update: 2021-09-04 19:39 IST
ಮುಹಮ್ಮದ್ ಸೌಹಾದ್

ಬಂಟ್ವಾಳ : ಇಲ್ಲಿಗೆ ಸಮೀಪದ ಬಾರೆಕಾಡ್ ಎಂಬಲ್ಲಿ‌ ಕಲ್ಲಿನ ಕೋರೆಯ ನೀರಿನಲ್ಲಿ‌ ಆಟವಾಡಲು ಇಳಿದ ಬಾಲಕನೋರ್ವ ಆಯತಪ್ಪಿ ಬಿದ್ದು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಶನಿವಾರ ಸಂಜೆ ನಡೆದಿದೆ.

ಬಂಟ್ವಾಳ ಕಸ್ಬಾ ಗ್ರಾಮದ ಬಾರೆಕಾಡ್ ಕ್ವಾಟ್ರಸ್ ನಿವಾಸಿ ಮುಹಮ್ಮದ್ ಸಾದಿಕ್ ಅವರ ಪುತ್ರ ಮುಹಮ್ಮದ್ ಸೌಹಾದ್ (11) ಮೃತ ಬಾಲಕ. ಸುತ್ತ ಬೇಲಿ ಹಾಕಲಾಗಿದ್ದ ಈ ಕೆಂಪು ಕಲ್ಲಿನ ಕೋರೆಯಲ್ಲಿ ಮಳೆಯಿಂದಾಗಿ ನೀರು ತುಂಬಿತ್ತೆನ್ನಲಾಗಿದೆ.

ಇಬ್ಬರು  ಸ್ನೇಹಿತರ ಜೊತೆ ಆಟವಾಡಲೆಂದು ಇಳಿದಾಗ ಸೌಹಾದ್ ಆಯತಪ್ಪಿ ನೀರಿಗೆ ಬಿದ್ದಿದ್ದಾನೆ. ತಕ್ಷಣ ಇಬ್ಬರು ಸ್ನೇಹಿತರು ನೀಡಿದ ಮಾಹಿತಿಯನ್ವಯ ಸ್ಥಳೀಯರು ಧಾವಿಸಿ ಈತನನ್ನು ನೀರಿನಿಂದ ಮೇಲಕ್ಕೆತ್ತಿ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದರಾದರೂ ದಾರಿ ಮಧ್ಯೆ  ಕೊನೆಯುಸಿರೆಳೆದಿದ್ದ ಎಂದು ತಿಳಿದು ಬಂದಿದೆ.

ಈ ಬಗ್ಗೆ ಬಂಟ್ವಾಳ ನಗರ ಠಾಣೆಯಲ್ಲಿ ಕೇಸು ದಾಖಲಾಗಿದೆ. ಕಳೆದ ಆರು ತಿಂಗಳಿನಿಂದ ಕೋರೆಯಲ್ಲಿ ಕೆಲಸಗಳು ಸ್ಥಗಿತಗೊಂಡ ಹಿನ್ನೆಲೆಯಲ್ಲಿ ಸುತ್ತ ಬೇಲಿ ಹಾಕಲಾಗಿತ್ತು ಎನ್ನಲಾಗಿದೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News