ಹೊಯ್ಸಳ, ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ

Update: 2021-09-04 14:45 GMT

ಬೆಂಗಳೂರು, ಸೆ. 4: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ 6 ರಿಂದ 18 ವರ್ಷದೊಳಗಿನ ಮಕ್ಕಳು ತಮ್ಮ ಪ್ರಾಣದ ಹಂಗನ್ನು ತೊರೆದು ಹಾಗೂ ಸಮಯ ಪ್ರಜ್ಞೆಯಿಂದ ಇತರರ ಪ್ರಾಣದ ರಕ್ಷಣೆಗಾಗಿ ಧೈರ್ಯ ಸಾಹಸ ಪ್ರದರ್ಶಿಸಿದ ಬಾಲಕರಿಗೆ ಹೊಯ್ಸಳ ಮತ್ತು ಬಾಲಕಿಯರಿಗೆ ಕೆಳದಿ ಚೆನ್ನಮ್ಮ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಪ್ರಶಸ್ತಿಯನ್ನು ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರದಾನ ಮಾಡಲಾಗುವುದು. ಧೈರ್ಯ ಸಾಹಸ ಪ್ರದರ್ಶನ 2020 ಆ.1ರಿಂದ 2021ರ ಜುಲೈ 31ರೊಳಗೆ ನಡೆದಿರಬೇಕು. 2003ರ ಆಗಸ್ 1ರಂದು ಹಾಗೂ ನಂತರ ಜನಿಸಿದ ಮಕ್ಕಳು ಈ ಪ್ರಶಸ್ತಿಗೆ ಅರ್ಹರಾಗಿರುತ್ತಾರೆ. ಪ್ರಶಸ್ತಿಗೆ ಆಯ್ಕೆಯಾದ ಮಕ್ಕಳಿಗೆ ತಲಾ 10 ಸಾವಿರ ರೂ.ಗಳ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ನೀಡಲಾಗುವುದು.

ಅರ್ಜಿ ನಮೂನೆಗಳನ್ನು ಸಂಬಂಧಿಸಿದ ಜಿಲ್ಲೆಯ ಉಪ ನಿರ್ದೇಶಕರು, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇವರಿಂದ ಪಡೆದು ಭರ್ತಿ ಮಾಡಿದ ಅರ್ಜಿಗಳನ್ನು ಸೆ.31ರೊಳಗೆ ಸಲ್ಲಿಸತಕ್ಕದ್ದು ಎಂದು ಜಂಟಿ ನಿರ್ದೇಶಕರು (ಪಿಡಿಎಂ), ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬೆಂಗಳೂರು ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News