ಮುಖ್ಯಮಂತ್ರಿಗಳ ರೈತ ವಿದ್ಯಾನಿಧಿ ಕಾರ್ಯಕ್ರಮ
Update: 2021-09-04 20:19 IST
ಉಡುಪಿ, ಸೆ.4: ರೈತರ ಮಕ್ಕಳ ಉನ್ನತ ಶಿಕ್ಷಣವನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಹೊಸ ಶಿಷ್ಯ ವೇತನ ಯೋಜನೆಯಡಿ ಮುಖ್ಯಮಂತ್ರಿಗಳ ರೈತ ವಿದ್ಯಾನಿಧಿ ಕಾರ್ಯಕ್ರಮವನ್ನು ಜಾರಿಗೆ ತಂದಿದ್ದು, ಸೆ.5ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಇದನ್ನು ಉದ್ಘಾಟಿಸಿ ಲೋಕಾರ್ಪಣೆ ಮಾಡಲಿದ್ದಾರೆ.
ಈ ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲೆಯಿಂದ 5 ಮಂದಿ ವಿದ್ಯಾರ್ಥಿಗಳು ಭಾಗವಹಿಸಲಿದ್ದು, ಆಸಕ್ತ ರೈತರು ಯೂಟ್ಯೂಬ್ ಲಿಂಕ್ ಮೂಲಕ ಇದನ್ನು - https://www.youtube.com/watch?v=sfZ-FQaWUfI- ವೀಕ್ಷಿಸ ಬಹುದು ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕರ ಪ್ರಕಟಣೆ ತಿಳಿಸಿದೆ.