ಸೆ.6: ಶಕ್ತಿ ಶಿಕ್ಷಣ ಸಂಸ್ಥೆಯಿಂದ ಶಿಕ್ಷಕರ ದಿನಾಚರಣೆ
Update: 2021-09-04 22:22 IST
ಮಂಗಳೂರು, ಸೆ.4: ಶಕ್ತಿನಗರದ ಶಕ್ತಿ ಪೂರ್ವ ಪ್ರಾಥಮಿಕ ಶಾಲೆ, ಶಕ್ತಿ ರೆಸಿಡೆನ್ಯಿಯಲ್ ಶಾಲೆ ಮತ್ತು ಶಕ್ತಿ ಪಪೂ ಕಾಲೇಜಿನಿಂದ ಸೆ.6ರಂದು ಮಧ್ಯಾಹ್ನ 2:30ಕ್ಕೆ ರೇಷ್ಮ ಮೆಮೋರಿಯಲ್ ಸಭಾಂಗಣದಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮದಲ್ಲಿ ನಿವೃತ್ತ ಉಪನ್ಯಾಸಕ ಡಾ.ಪಿ.ಅನಂತ ಕೃಷ್ಣ ಭಟ್ ಅವರಿಗೆ ಸನ್ಮಾನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಮುಖ್ಯ ಅತಿಥಿಯಾಗಿ ಕ್ಯಾ.ಗಣೇಶ್ ಕಾರ್ಣಿಕ್ ಭಾಗವಹಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಕ್ತಿ ಎಜ್ಯುಕೇಶನ್ ಟ್ರಸ್ಟ್‌ನ ಆಡಳಿತಾಧಿಕಾರಿ ಡಾ. ಕೆ.ಸಿ. ನಾಯಕ್ ವಹಿಸಲಿದ್ದಾರೆ.
ಕಾರ್ಯಕ್ರಮದ ವೇದಿಕೆಯಲ್ಲಿ ಸಂಸ್ಥೆಯ ಪ್ರಧಾನ ಸಲಹೆಗಾರ ರಮೇಶ್ ಕೆ., ಅಭಿವೃದ್ಧಿ ಅಧಿಕಾರಿ ಪ್ರಖ್ಯಾತ್ ರೈ, ಶಕ್ತಿ ಪಪೂ ಕಾಲೇಜಿನ ಪ್ರಾಂಶುಪಾಲ ಟಿ.ರಾಜಾರಾಮ್ ರಾವ್, ಶಕ್ತಿ ರೆಸಿಡೆನ್ಶಿಲ್ ಶಾಲೆಯ ಪ್ರಾಂಶುಪಾಲೆ ವಿದ್ಯಾ ಕಾಮತ್ ಜಿ., ಶಕ್ತಿ ಪೂರ್ವ ಪ್ರಾಥಮಿಕ ಶಾಲೆಯ ಸಂಚಾಲಕಿ ನೀಮಾ ಸಕ್ಸೇನಾ ಉಪಸ್ಥಿತರಿರಲಿದ್ದಾರೆ.