ಹಾಸನ: ರ್‍ಯಾಲಿ ನಡೆಸಿ ಹುಟ್ಟುಹಬ್ಬ ಆಚರಿಸಿದ ಬಿಜೆಪಿ ಜಿಲ್ಲಾಧ್ಯಕ್ಷ; ಕಾಂಗ್ರೆಸ್ ಆಕ್ರೋಶ

Update: 2021-09-04 17:03 GMT

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ ಗಡಿ ಜಿಲ್ಲೆ ಸೇರಿದಂತೆ ಇತರ ಕೆಲವು ಕಡೆಗಳಲ್ಲಿ ವಾರಾಂತ್ಯದ ಕರ್ಫ್ಯೂ ಜಾರಿಯಲ್ಲಿದ್ದು, ಇದೀಗ ಹಾಸನದ ಬಿಜೆಪಿ ಜಿಲ್ಲಾಧ್ಯಕ್ಷ ಎಚ್.ಕೆ ಸುರೇಶ್ ತನ್ನ ಅಭಿಮಾನಿಗಳೊಂದೊಗೆ ರ್‍ಯಾಲಿ ನಡೆಸಿ ಹುಟ್ಟು ಹಬ್ಬ ಆಚರಿಸಿ ಕೋವಿಡ್ ನಿಯಮಗಳನ್ನು ಉಲ್ಲಂಘಿಸಿದ್ದಾರೆ. 

ಈ ಕುರಿತು ಟ್ವಿಟರ್ ನಲ್ಲಿ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಕಾಂಗ್ರೆಸ್, ಹಾಸನ ಬಿಜೆಪಿ ಜಿಲ್ಲಾಧ್ಯಕ್ಷ ಅದ್ದೂರಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಕೋವಿಡ್ ನಿಯಮ ಉಲ್ಲಂಘನೆ ನೆಪದಲ್ಲಿ ಸಾರ್ವಜನಿಕರಿಗೆ ಅನಗತ್ಯ ಕಿರುಕುಳ ನೀಡುವ ಪೊಲೀಸರು ಈವರೆಗೂ ಯಾರ ವಿರುದ್ಧವೂ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದೆ. 

'ರಾಜ್ಯದಲ್ಲಿ ಜನಸಾಮಾನ್ಯರಿಗೊಂದು ಕಾನೂನು, ಬಿಜೆಪಿಯವರಿಗೊಂದು ಕಾನೂನು ಜಾರಿಯಲ್ಲಿದೆಯೇ?' ಎಂದು ಪ್ರಶ್ನಿಸಿದೆ. 

ಇನ್ನು ಹಾಸನ ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳ ನಿಯಂತ್ರಣಕ್ಕೆ ಜಿಲ್ಲಾಡಳಿತ ವೀಕೆಂಡ್ ಕರ್ಫ್ಯೂ ವಿಧಿಸಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News