ಬೆಂಗಳೂರು: ಪೊಲೀಸ್ ಐಜಿ ಮನೆಯ ಬೀಗ ಮುರಿದು ಕಳವು

Update: 2021-09-04 17:28 GMT

ಬೆಂಗಳೂರು, ಸೆ.4: ಮೈಸೂರಿನ ಪೊಲೀಸ್ ತರಬೇತಿ ಕೇಂದ್ರದ ಪೊಲೀಸ್ ಮಹಾ ನಿರೀಕ್ಷಕ(ಐಜಿಪಿ)ವಿಪುಲ್ ಕುಮಾರ್ ಅವರ ಮನೆಯ ಬೀಗ ಮುರಿದು ಲಕ್ಷಾಂತರ ಮೌಲ್ಯದ ವಸ್ತುಗಳನ್ನು ದುಷ್ಕರ್ಮಿಗಳು ಕಳ್ಳತನ ಮಾಡಿ ಪರಾರಿಯಾಗಿರುವ ಘಟನೆ ಬೊಮ್ಮಸಂದ್ರ ವ್ಯಾಪ್ತಿಯ ಸೂರ್ಯ ನಗರದಲ್ಲಿ ನಡೆದಿದೆ.

ಕಳ್ಳತನವಾಗಿರುವ ಐಜಿಪಿ ವಿಪುಲ್ ಕುಮಾರ್ ಅವರಮನೆಗೆ ಕೇಂದ್ರ ವಲಯ ಐಜಿ ಚಂದ್ರಶೇಖರ್ ಹಾಗೂ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬೆರಳಚ್ಚು ತಜ್ಞರನ್ನು ಕರೆಸಿ ಪರಿಶೀಲನೆ ನಡೆಸಿದ್ದಾರೆ. ಮನೆಯಲ್ಲಿ ಸಿಸಿಟಿವಿ ಕ್ಯಾಮೆರಾ ಇದ್ದರೂ ಕೆಲಸ ಮಾಡುತ್ತಿರಲಿಲ್ಲ. ಸೂರ್ಯಸಿಟಿಯಲ್ಲಿ ಇತ್ತೀಚಿನ ದಿನಗಳಲ್ಲಿ ದರೋಡೆ ಮತ್ತು ಕಳ್ಳತನದ ಪ್ರಕರಣಗಳು ಹೆಚ್ಚಾಗುತ್ತಿವೆ. ಹಲವು ಬಾರಿ ದೂರು ನೀಡಿದ್ದರೂ ಪೊಲೀಸರು ಕ್ರಮ ಕೈಗೊಳ್ಳುತ್ತಿಲ್ಲ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದರು. ಈ ಮೊಕದ್ದಮೆ ದಾಖಲಿಸಿಕೊಂಡಿರುವ ಸೂರ್ಯನಗರ ಠಾಣೆ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.  

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News