ಭದ್ರತಾ ಸಿಬ್ಬಂದಿಯ ಸಾವಿನ ಪ್ರಕರಣ: ಬಿಜೆಪಿಯ ಸುವೇಂದು ಅಧಿಕಾರಿಗೆ ಬಂಗಾಳ ಪೊಲೀಸರ ಸಮನ್ಸ್

Update: 2021-09-04 18:03 GMT

ಕೋಲ್ಕತಾ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರ ಮಾಜಿ ಆಪ್ತ, ಪಶ್ಚಿಮ ಬಂಗಾಳ ಬಿಜೆಪಿ ನಾಯಕ ಸುವೇಂದು ಅಧಿಕಾರಿಯನ್ನು  2018 ರಲ್ಲಿ ಭದ್ರತಾ ಸಿಬ್ಬಂದಿಯ ಸಾವಿನ ಪ್ರಕರಣದ ಕುರಿತು ಪೊಲೀಸರು ಇಂದು ಸಮನ್ಸ್ ನೀಡಿದ್ದಾರೆ. ಭದ್ರತಾ ಸಿಬ್ಬಂದಿಯು ಗುಂಡಿನಿಂದ ಆಗಿದ್ದ ಗಾಯದಿಂದ ಸಾವನ್ನಪ್ಪಿದ್ದರು.

ಸೋಮವಾರ ರಾಜ್ಯ ಅಪರಾಧ ತನಿಖಾ ಇಲಾಖೆಯ ಮುಂದೆ ಹಾಜರಾಗುವಂತೆ ಸುವೇಂದು ಅಧಿಕಾರಿಗೆ ಸೂಚಿಸಲಾಗಿದೆ. ಭದ್ರತಾ ಸಿಬ್ಬಂದಿ ಆತ್ಮಹತ್ಯೆಯಿಂದ ಸಾವನ್ನಪ್ಪಿದ್ದಾರೆಯೇ ಅಥವಾ ಬೇರೆಯವರು ಇದರಲ್ಲಿ ಭಾಗಿಯಾಗಿದ್ದಾರೆಯೇ ಎಂದು ಸಂಸ್ಥೆ ತನಿಖೆ ನಡೆಸುತ್ತಿದೆ.

ಕಲ್ಲಿದ್ದಲು ಕಳ್ಳಸಾಗಣೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ತೃಣಮೂಲ ಸಂಸದ ಅಭಿಷೇಕ್ ಬ್ಯಾನರ್ಜಿ,ಗೆ ಜಾರಿ ನಿರ್ದೇಶನಾಲಯದ ಮುಂದೆ ಹಾಜರಾಗಲು ಸಮನ್ಸ್ ನೀಡಿದ ಕೆಲವು ದಿನಗಳ ನಂತರ ಈ ಬೆಳವಣಿಗೆ ನಡೆದಿದೆ. ಡೈಮಂಡ್ ಹಾರ್ಬರ್ ಸಂಸದ ಬ್ಯಾನರ್ಜಿ ಅವರ ಪತ್ನಿ ರುಜಿರಾ ಬ್ಯಾನರ್ಜಿ ಕೂಡ ಸೆಪ್ಟೆಂಬರ್ 1 ರಂದು ಹೊಸದಿಲ್ಲಿಯಲ್ಲಿರುವ ಏಜೆನ್ಸಿಯ ಮುಂದೆ ಹಾಜರಾಗುವಂತೆ ಸೂಚಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News