ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣದ ತಪ್ಪಿತಸ್ಥರಿಗೆ ಶಿಕ್ಷೆ ಖಚಿತ: ಸಚಿವ ಸೋಮಶೇಖರ್

Update: 2021-09-05 15:44 GMT

ಚಾಮರಾಜನಗರ: 'ಜಿಲ್ಲಾಸ್ಪತ್ರೆಯಲ್ಲಿ ಮೇ 2ರಂದು ರಾತ್ರಿ ಆಮ್ಲಜನಕದ ಕೊರತೆಯಿಂದ 24 ಜನರು ಮೃತಪಟ್ಟ ಪ್ರಕರಣದಲ್ಲಿ ತಪ್ಪಿತಸ್ಥರಿಗೆ ಖಂಡಿತವಾಗಿಯೂ ಶಿಕ್ಷೆ ಆಗುತ್ತದೆ. ಅದರಲ್ಲಿ ಅನುಮಾನವೇ ಬೇಡ' ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಟಿ.ಸೋಮಶೇಖರ್‌ ಹೇಳಿದ್ದಾರೆ.

ರವಿವಾರ ಚಾಮರಾಜನಗರದಲ್ಲಿ ಶಿಕ್ಷಕರ ದಿನಾಚರಣೆ ಸಮಾರಂಭದಲ್ಲಿ ಭಾಗವಹಿಸಿದ‌ ಬಳಿಕ ಮಾದ್ಯಮದವರೊಂದಿಗೆ ಮಾತನಾಡಿದ  ಉಸ್ತುವಾರಿ ಸಚಿವ ಎಸ್. ಟಿ .ಸೋಮಶೇಖರ್,  ನ್ಯಾಯಾಲಯದ ಉಸ್ತುವಾರಿಯಲ್ಲಿ ಪ್ರಕರಣದ ತನಿಖೆ ನಡೆಯುತ್ತಿದೆ. ನಿವೃತ್ತ ನ್ಯಾಯಮೂರ್ತಿಗಳು ತನಿಖೆ ನಡೆಸಿದ್ದಾರೆ. ವರದಿ ಬರಲಿದೆ. ಬಳಿಕ ಮುಖ್ಯಮಂತ್ರಿಯವರು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಿದ್ದಾರೆ ಎಂದರು.

ಪ್ರಕರಣ ತನಿಖೆ ನಡೆಯುತ್ತಿದೆ. ತಪ್ಪಿತಸ್ಥರ ವಿರುದ್ಧ ನೂರಕ್ಕೆ ನೂರರಷ್ಟು ತಪ್ಪಿತಸ್ಥರಿಗೆ ಶಿಕ್ಷೆ ಆಗುತ್ತದೆ. ಇದರಲ್ಲಿ ಶೇ 1ರಷ್ಟೂ ಅನುಮಾನ ಬೇಡ’ ಎಂದು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News