ರಾಜಸ್ಥಾನ: ಅಪ್ರಾಪ್ತ ಪುತ್ರಿಯ ಮೇಲೆ ಅತ್ಯಾಚಾರ ಎಸಗಿದ ತಂದೆ
ಜೋಧಪುರ: ವ್ಯಕ್ತಿಯೊಬ್ಬ ತನ್ನ ಮಗಳ ಮೇಲೆ ಅತ್ಯಾಚಾರ ಎಸಗಿರುವ ಪೈಶಾಚಿಕ ಕೃತ್ಯ ರಾಜಸ್ಥಾನದ ಜಲೋರ್ ಜಿಲ್ಲೆಯಲ್ಲಿ ನಡೆದಿದ್ದು, ಘಟನೆ ತಿಳಿದ ನಂತರ ಆ ವ್ಯಕ್ತಿಯ ಮಗ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ವೀಡಿಯೊ ಕ್ಲಿಪ್ ಮೂಲಕ ಅಪ್ರಾಪ್ತ ಬಾಲಕಿಯ ಸಹೋದರನಿಗೆ ಅತ್ಯಾಚಾರದ ಕೃತ್ಯ ತಿಳಿದಿದ್ದು, ಆಡಿಯೋ ಕ್ಲಿಪ್ ನಲ್ಲಿ ಬಾಲಕಿ ತನ್ನ ಚಿಕ್ಕಮ್ಮನಿಗೆ ಇಡೀ ಘಟನೆಯನ್ನು ವಿವರಿಸಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.
32 ನಿಮಿಷಗಳ ಆಡಿಯೋ ಕ್ಲಿಪ್ ಶನಿವಾರ ಬಹಿರಂಗವಾದ ನಂತರ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಅದೇ ದಿನ, ಜಿಲ್ಲೆಯ ಸಂಚೋರ್ ಪ್ರದೇಶದ ನರ್ಮದಾ ಕಾಲುವೆಗೆ ಹಾರಿ ಬಾಲಕಿಯ ಸಹೋದರ ಮೃತಪಟ್ಟಿದ್ದಾನೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪೋಲಿಸ್ ತಂಡವು ಅಲ್ಲಿಗೆ ತಲುಪುವ ಮೊದಲೇ ಬಾಲಕಿಯ ತಂದೆ ಆತನ ಮನೆಯಿಂದ ಪರಾರಿಯಾಗಿದ್ದಾನೆ. ಆತನಿಗಾಗಿ ಹುಡುಕಾಟ ನಡೆಯುತ್ತಿದೆ ಎಂದು ಅಧಿಕಾರಿಯೊಬ್ಬರು ಹೇಳಿದರು.
ಬಾಲಕಿಯ ಹೇಳಿಕೆಯನ್ನು ದಾಖಲಿಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.