ಅ.23ರಂದು ರಾಜ್ಯಾದ್ಯಂತ ಮೆಗಾ ಲೋಕ ಅದಾಲತ್

Update: 2021-09-05 18:19 GMT

ಬೆಂಗಳೂರು, ಸೆ. 5: ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರವು ಅಕ್ಟೋಬರ್ 23ರಂದು ರಾಜ್ಯಾದ್ಯಂತ ಮೆಗಾಲೋಕ ಅದಾಲತ್ ಹಮ್ಮಿಕೊಂಡಿದೆ. 

ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣ, ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಇಚ್ಛಿಸುವ ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬಹುದು. 

ಹೆಚ್ಚಿನ ಮಾಹಿತಿಗಾಗಿ ನ್ಯಾಯ ಸಂಯೋಗ, ಕಾನೂನು ನೆರವು ಘಟಕ, ನ್ಯಾಯ ದೇಗುಲ, ಮೊದಲನೇ ಮಹಡಿ, ಸಿದ್ದಯ್ಯ ರಸ್ತೆ, ಬೆಂಗಳೂರು-560027, ದೂರವಾಣಿ ಸಂಖ್ಯೆ: 080-2211 1730 ಸಂಪರ್ಕಿಸಬಹುದು. ಸಹಾಯವಾಣಿ ಸಂಖ್ಯೆ-180042590900 ಸಂಪರ್ಕಿಸಿಯೂ ಲೋಕ ಅದಾಲತ್ ಬಗ್ಗೆ ಮಾಹಿತಿ ಪಡೆಯಬಹುದು ಎಂದು ಪ್ರಾಧಿಕಾರದ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News