ಮೈಸೂರು ಮಹಾನಗರ ಪಾಲಿಕೆ ವಾರ್ಡ್ ನಂ 36 ರ ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ರಜನಿ ಅಣ್ಣಯ್ಯ ಗೆಲುವು

Update: 2021-09-06 17:02 GMT
ರಜನಿ  ಅಣ್ಣಯ್ಯ

ಮೈಸೂರು,ಸೆ.6: ಮೈಸೂರು ಮಹಾನಗರ ಪಾಲಿಕೆ ವಾರ್ಡ್ ನಂ.36ರ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಜನಿ ಅಣ್ಣಯ್ಯ ಗೆಲುವು ಸಾಧಿಸಿದ್ದಾರೆ.

ಇಂದು ಮಹಾನಗರ ಪಾಲಿಕೆ ವಾರ್ಡ್ ನಂ.36ರ ಉಪಚುನಾವಣೆಯ ಫಲಿತಾಂಶ ಹೊರ ಬಿದ್ದಿದ್ದು ಕಾಂಗ್ರೆಸ್ ಅಭ್ಯರ್ಥಿ ರಜನಿ  ಅಣ್ಣಯ್ಯ 4,113 ಮತಗಳನ್ನ ಪಡೆಯುವ ಮೂಲಕ ಜಯಭೇರಿ ಬಾರಿಸಿದ್ದಾರೆ.   ಚುನಾವಣೆಯಲ್ಲಿ ಜೆಡಿಎಸ್ ಗೆ ಮುಖಭಂಗವಾಗಿದ್ದು, ಜೆಡಿಎಸ್ ನ ಅಭ್ಯರ್ಥಿ ಲೀಲಾವತಿಗೆ 2116 ಮತಗಳು, ಬಿಜೆಪಿ ಅಭ್ಯರ್ಥಿ ಶೋಭಾ ಅವರಿಗೆ 601 ಮತಗಳು ಲಭಿಸಿವೆ.

ಮಾಜಿ ಮೇಯರ್ ರುಕ್ಮಿಣಿ ಮಾದೇಗೌಡ ಸದಸ್ಯತ್ವ ರದ್ದಿನಿಂದಾಗಿ ವಾರ್ಡ್ ನಂ.36ಕ್ಕೆ  ಉಪಚುನಾವಣೆ ನಡೆದಿತ್ತು. ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜಯ ಸಾಧಿಸಿದ್ದು ಈ ಮೂಲಕ ಜೆಡಿಎಸ್ ಗೆ ಮುಖಭಂಗ ಆದಂತಾಗಿದೆ. ಕಾಂಗ್ರೆಸ್- ಜೆಡಿಎಸ್ ನಡುವಿನ ಜಿದ್ದಾಜಿದ್ದಿನಿಂದ ಉಪಚುನಾವಣೆ ಫಲಿತಾಂಶ ಸಾಕಷ್ಟು ಕುತೂಹಲ ಕೆರಳಿಸಿತ್ತು. ಈ ಸ್ಥಾನವನ್ನು ಜೆಡಿಎಸ್ ನಿಂದ ಕಸಿದುಕೊಳ್ಳುವಲ್ಲಿ ಕಾಂಗ್ರೆಸ್ ಯಶಸ್ವಿಯಾಗಿದೆ.

2018ರ ಚುನಾವಣೆಯಲ್ಲಿ ರಜನಿ ಅಣ್ಣಯ್ಯ ಅವರು ರುಕ್ಮಿಣಿ ಎದುರು 364 ಮತಗಳಿಂದ ಸೋಲು ಅನುಭವಿಸಿದ್ದರು. ಉಪಚುನಾವಣೆಯಲ್ಲಿ ಭಾರಿ ಅಂತರದ ಗೆಲುವು ಪಡೆದಿದ್ದಾರೆ. ರಜನಿ ಅಣ್ಣಯ್ಯ ಗೆಲುವು ಸಾಧಿಸುತ್ತಿದ್ದಂತೆ ಕಾಂಗ್ರೆಸ್ ಪಾಳಯದಲ್ಲಿ ಸಂತಸದ ಅಲೆ ಎದಿದ್ದು, ಕಾಂಗ್ರೆಸ್ ಕಾರ್ಯಕರ್ತರು ಅಭಿನಂದನೆ ಸಲ್ಲಿಸಿದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News