ಸಚಿವ ಮುರುಗೇಶ್ ನಿರಾಣಿ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆ ಸೃಷ್ಟಿಸಿ ಹಣ ಸಹಾಯ ಯಾಚನೆ!

Update: 2021-09-07 05:23 GMT

ಬೆಂಗಳೂರು, ಸೆ.7: ಭಾರೀ ಮತ್ತು ಮಧ್ಯಮ ಗಾತ್ರ ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ ಅವರ ಹೆಸರಿನಲ್ಲಿ ಕಿಡಿಗೇಡಿಗಳು ನಕಲಿ ಫೇಸ್ ಬುಕ್ ಖಾತೆ ತೆರೆದು ಹಣದ ಸಹಾಯ ಯಾಚಿಸುತ್ತಿರುವುದು ಬೆಳಕಿಗೆ ಬಂದಿದೆ.

ಈ ಬಗ್ಗೆ ತನ್ನ ಅಧಿಕೃತ ಫೇಸ್ ಬುಕ್ ಹಾಗೂ ಟ್ವೀಟರ್ ಖಾತೆಯಲ್ಲಿ ಪೋಸ್ಟ್ ವೊಂದನ್ನು ಹಾಕಿರುವ ಸಚಿವ ಮುರಗೇಶ್ ನಿರಾಣಿ, ಸಾರ್ವಜನಿಕರು ಯಾರೂ ಇದನ್ನು ನಂಬಿ ವಂಚನೆಗೆ ಒಳಗಾಗಬೇಡಿ ಎಂದು ಮನವಿ ಮಾಡಿದ್ದಾರೆ.

''ಸ್ನೇಹಿತರೇ ಕೆಲವು ಕಿಡಿಗೇಡಿಗಳು ಸಾಮಾಜಿಕ ಜಾಲತಾಣದಲ್ಲಿ ನನ್ನ ಹೆಸರು ದುರ್ಬಳಕೆ ಮಾಡಿಕೊಂಡು ನಾನು ಹಣದ ಸಹಾಯ ಕೇಳುತ್ತಿದ್ದೇನೆಂದು ಸುಳ್ಳು ವದಂತಿ ಹಬ್ಬಿಸುತ್ತಿರುವುದು ನನ್ನ ಗಮನಕ್ಕೆ ‌ಬಂದಿದೆ. ಇದು ಸಂಪೂರ್ಣವಾಗಿ ಸತ್ಯಕ್ಕೆ ‌ದೂರವಾದ ಮಾತು. ದಯವಿಟ್ಟು ಯಾರೊಬ್ಬರೂ ಇಂತಹ ವಂಚನೆಗೆ ಒಳಗಾಗಬೇಡಿ" ಎಂದು ಮನವಿ ಮಾಡಿದ್ದಾರೆ.

ಈ ಬಗ್ಗೆ ನಾನು ಸೈಬರ್ ಕ್ರೈಮ್ ಗೆ ದೂರು ನೀಡುವ ಬಗ್ಗೆ ಚಿಂತನೆ ನಡೆಸಿದ್ದೇನೆ". ಎಂದು ಸಚಿವರು ಎಚ್ಚರಿಸಿದ್ದಾರೆ.

Full View

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News