ಪಿಕ್‌ಅಪ್ ವಾಹನ ಢಿಕ್ಕಿ: ಪಾದಚಾರಿ ಮೃತ್ಯು

Update: 2021-09-07 15:50 GMT

ಮಲ್ಪೆ, ಸೆ.7: ಬೊಲೇರೋ ಪಿಕ್‌ಅಪ್ ವಾಹನ ಢಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಮಲ್ಪೆಯ ಮತ್ಸ್ಯಾ ಮೇರಿನ್ ಐಸ್‌ಪ್ಲಾಂಟ್ ಬಳಿ ಸೆ.6ರಂದು ರಾತ್ರಿ 10ಗಂಟೆ ಸುಮಾರಿಗೆ ನಡೆದಿದೆ.

ಮೃತರನ್ನು ಯದುವೀರ (70) ಎಂದು ಗುರುತಿಸಲಾಗಿದೆ.

ಮಲ್ಪೆ ಕಡೆಯಿಂದ ನಿರ್ಲಕ್ಷ್ಯತನ ಹಾಗೂ ಅಜಾಗರೂಕತೆಯಿಂದ ಬಂದ ವಾಹನ ರಸ್ತೆಯ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಯದುವೀರರಿಗೆ ಢಿಕ್ಕಿ ಹೊಡೆಯಿತು. ಇದರಿಂದ ಗಂಭೀರವಾಗಿ ಗಾಯಗೊಂಡ ಅವರು ಜಿಲ್ಲಾಆಸ್ಪತ್ರೆಗೆ ಕರೆದುಕೊಂಡು ಹೋಗುವ ದಾರಿ ಮಧ್ಯೆ ಮೃತಪಟ್ಟರು. ಈ ಬಗ್ಗೆ ಮಲ್ಪೆಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News