ಮೈಸೂರು ಸಾಮೂಹಿಕ ಅತ್ಯಾಚಾರ ಪ್ರಕರಣ: ಏಳನೇ ಆರೋಪಿಯ ಬಂಧನ

Update: 2021-09-07 15:51 GMT

ಮೈಸೂರು,ಸೆ.7: ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಏಳನೇ ಆರೋಪಿಯನ್ನು ಮೈಸೂರು ಪೊಲೀಸರು ಬಂಧಿಸಿದ್ದಾರೆ ಎನ್ನಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ 6 ಮಂದಿಯನ್ನು ಬಂಧಿಸಿದ್ದ ಪೊಲೀಸರು ಮತ್ತೊಬ್ಬನಿಗಾಗಿ ಶೋಧ ನಡೆಸುತ್ತಿದ್ದರು. ಇಂದು ತಮಿಳುನಾಡಿನ ಗ್ರಾಮವೊಂದರಲ್ಲಿ ಅಡಗಿ ಕುಳಿತಿದ್ದ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದು ಮಂಗಳವಾರ ಮೈಸೂರಿಗೆ ಕರೆತರುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಹೆಜ್ಜೆ ಗುರುತು ಬೆನ್ನತ್ತಿದ ಮೈಸೂರು ಪೊಲೀಸರು ನಂಜನಗೂಡಿನ ಬಾರ್ ವೊಂದರಲ್ಲಿ ಮಧ್ಯ ಸೇವಿಸಿ, ಮೊಬೈಲ್ ವೈರ್ ಖರೀದಿಸಿದ್ದ ಅಂಗಡಿಗಳಿಗೆ ತೆರಳಿ ಮಹಜರು ನಡೆಸಿದ್ದಾರೆ. 

ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿಗಳನ್ನು ಮಂಗಳವಾರ ಮೈಸೂರಿನ ಮೂರನೇ ಜೆಎಂಎಫ್‍ಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು ನ್ಯಾಯಾಧೀಶರು ಐವರು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಮತ್ತೊಬ್ಬ ಬಾಲಪರಾಧಿಯಾಗಿರುವುದರಿಂದ ಆತನನ್ನು ಬಾಲ ಮಂದಿರಕ್ಕೆ ಕಳುಹಿಸಲಾಗಿದೆ ಎಂದು ತಿಳಿದು ಬಂದಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News