ಕನ್ನಡ ಭಾಷೆಗೆ ಅವಮಾನ ಮಾಡಿದ ಆರೋಪ: ಗೂಗಲ್ ವಿರುದ್ಧ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

Update: 2021-09-08 13:54 GMT

ಬೆಂಗಳೂರು, ಸೆ.8: ಕನ್ನಡ ಭಾಷೆಗೆ ಅವಮಾನ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಗೂಗಲ್ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

ಭ್ರಷ್ಟಾಚಾರ ವಿರೋಧಿ ಸಮಿತಿ ಭಾರತ್ ಟ್ರಸ್ಟ್(ಎಸಿಸಿಐಟಿ) ಎಂಬ ಸಂಸ್ಥೆ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ನ್ಯಾಯಪೀಠ, ಅರ್ಜಿ ವಜಾಗೊಳಿಸಿ ಆದೇಶಿಸಿದೆ. 

ವಿಚಾರಣೆ ನಡೆಸಿದ ನ್ಯಾಯಾಲಯ, ಈ ಕುರಿತು ನಡೆದ ಘಟನೆಗೆ ಏನು ಕಾರಣ ಎಂದು ಗೂಗಲ್ ಸ್ಪಷ್ಟವಾಗಿ ನಮಗೆ ತಿಳಿಸಿದೆ. ಅಲ್ಲದೆ ಸಾರ್ವಜನಿಕವಾಗಿ ಕನ್ನಡಿಗರ ಕ್ಷಮೆ ಕೇಳಿದೆ. ಹೀಗಾಗಿ ಅರ್ಜಿಯನ್ನು ವಜಾಗೊಳಿಸಿದ್ದೇವೆ ಎಂದು ಹೇಳಿದೆ. 

ಗೂಗಲ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. 10 ಕೋಟಿ ದಂಡ ವಿಧಿಸಿ ಅದನ್ನು ಕನ್ನಡ ಮತ್ತು ಸಂಸಕೃತಿ ಇಲಾಖೆಗೆ ನೀಡಬೇಕು ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿತ್ತು. ಕೆಲವು ತಿಂಗಳ ಹಿಂದೆ, ಭಾರತದ ಅತ್ಯಂತ ಕೊಳಕು ಭಾಷೆ ಯಾವುದೆಂದು ಗೂಗಲ್‍ನಲ್ಲಿ ಹುಡುಕಿದರೆ ಕನ್ನಡ ಎಂಬ ಫಲಿತಾಂಶ ತೋರಿಸುತ್ತಿದ್ದುದು ವಿವಾದಕ್ಕೆ ಕಾರಣವಾಗಿತ್ತು. ಕನ್ನಡ ಅಭಿಮಾನಿಗಳು ಗೂಗಲ್ ವಿರುದ್ಧ ಭಾರಿ ಆಕ್ರೋಶ ವ್ಯಕ್ತಪಡಿಸಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News