ಕರ್ನಾಟಕ ಹೈಕೋರ್ಟ್‍ನ 10 ನ್ಯಾಯಮೂರ್ತಿಗಳು ಖಾಯಂ ಆಗಿ ನೇಮಕ

Update: 2021-09-08 14:35 GMT
ಕರ್ನಾಟಕ ಹೈಕೋರ್ಟ್

ಬೆಂಗಳೂರು, ಸೆ.8: ಕರ್ನಾಟಕ ಹೈಕೋರ್ಟ್‍ನಲ್ಲಿ ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ಕರ್ತವ್ಯ ನಿರ್ವಹಿಸುತ್ತಿದ್ದ 10 ಮಂದಿ ನ್ಯಾಯಮೂರ್ತಿಗಳನ್ನು ಖಾಯಂಗೊಳಿಸಿ ಸುಪ್ರೀಂಕೋರ್ಟ್ ಕೊಲಿಜಿಯಂ ಬುಧವಾರ ಅಧಿಸೂಚನೆ ಹೊರಡಿಸಿದೆ.

ನ್ಯಾಯಮೂರ್ತಿ ಮರಲೂರ್ ಇಂದ್ರಕುಮಾರ್ ಅರುಣ್, ನ್ಯಾ.ಇಂಗಲಗುಪ್ಪೆ ಸೀತಾರಾಮಯ್ಯ ಇಂದ್ರೇಶ್, ನ್ಯಾ.ರವಿ ವೆಂಕಪ್ಪ ಹೊಸಮನಿ, ನ್ಯಾ.ಸವಣೂರು ವಿಶ್ವಜಿತ್ ಶೆಟ್ಟಿ, ನ್ಯಾ. ಶಿವಶಂಕರ್ ಅಮರಣ್ಣನವರ್, ನ್ಯಾ.ಎಂ.ಗಣೇಶಯ್ಯ ಉಮಾ, ನ್ಯಾ.ವೇದವ್ಯಾಸಾಚಾರ್ ಶ್ರೀಶಾನಂದ, ನ್ಯಾ.ಹಂಚಟೆ ಸಂಜೀವ್ ಕುಮಾರ್, ನ್ಯಾ.ಪದ್ಮರಾಜ್ ನೇಮಚಂದ್ರ ದೇಸಾಯಿ ಹಾಗೂ ನ್ಯಾ.ಪಿ.ಕೃಷ್ಣ ಭಟ್ ಅವರನ್ನು ಖಾಯಂ ನ್ಯಾಯಮೂರ್ತಿಗಳಾಗಿ ರಾಜ್ಯ ಹೈಕೋರ್ಟ್‍ಗೆ ನೇಮಕ ಮಾಡಲಾಗಿದೆ.

ಈ ಹಿಂದೆ ರಾಜ್ಯ ಹೈಕೋರ್ಟ್‍ನಲ್ಲಿ ಮುಖ್ಯ ನ್ಯಾಯಮೂರ್ತಿಯಾಗಿದ್ದ ಎ.ಎಸ್.ಓಕ ಹಾಗೂ ನ್ಯಾ.ಬಿ.ವಿ.ನಾಗರತ್ನ ಅವರನ್ನು ಸುಪ್ರೀಂಕೋರ್ಟ್‍ಗೆ ಭಡ್ತಿ ನೀಡಿ ಕೊಲಿಜಿಯಂ ನೇಮಕ ಮಾಡಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News